ಭಾನುವಾರ, ನವೆಂಬರ್ 27, 2022
26 °C

ಮುಂಬೈ: ಅಪರಿಚಿತರಿಂದ ಗುಂಡಿನ ದಾಳಿ– ಯುವಕ ಸಾವು, ಮೂವರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಬೈಕ್‌ನಲ್ಲಿ ಬಂದ ಅಪರಿಚಿತರು ಗುಂಡಿನ ದಾಳಿ ನಡೆಸಿದ ಪರಿಣಾಮ 26 ವರ್ಷದ ವ್ಯಕ್ತಿ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಉಪನಗರ ಕಾಂದಿವಲಿ ಬಳಿ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಲಿಂಕ್ ರಸ್ತೆಯ ಲಾಲ್ಜಿಪಾಡಾದಲ್ಲಿ ನಡೆದಿದೆ. ಸಂತ್ರಸ್ತರು ಗುಂಪಿನಲ್ಲಿ ನಿಂತಿದ್ದ ವೇಳೆ ದುಷ್ಕರ್ಮಿಗಳು ಅವರ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ  ವಿಶಾಲ್ ಠಾಕೂರ್ ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಅಂಕಿತ್‌ ಯಾದವ್‌ ಎಂದು ಗುರುತಿಸಲಾಗಿದೆ. ಕಳೆದ ತಿಂಗಳು ಕೃಷ್ಣಾ ಜನ್ಮಾಷ್ಟಮಿ ವೇಳೆ ಮೃತ ವ್ಯಕ್ತಿ ಹಾಗೂ ದುಷ್ಕರ್ಮಿಗಳ ನಡುವೆ ಜಗಳ ನಡೆದಿತ್ತು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು