ಮಂಗಳವಾರ, ಡಿಸೆಂಬರ್ 7, 2021
24 °C

ಪರಮ್‌ ವೀರ್‌ ಸಿಂಗ್‌ ಪ್ರಕರಣ: ಹವಾಲಾ ದಂಧೆಕೋರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್‌ ವೀರ್‌ ಸಿಂಗ್‌ ವಿರುದ್ಧ ದಾಖಲಾದ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಗುಜರಾತ್‌ನಲ್ಲಿ ಹವಾಲಾ ದಂಧೆಕೋರ ಅಲ್ಪೇಶ್‌ ಪಟೇಲ್‌ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ಹೇಳಿದ್ದಾರೆ. 

ಕೆಲವು ತಿಂಗಳ ಹಿಂದೆ ಉದ್ಯಮಿ ಬಿಮಲ್‌ ಅಗರ್‌ವಾಲ್‌ ಅವರು ಪರಮ್‌ ವೀರ್‌ ಸಿಂಗ್‌ ವಿರುದ್ಧ ಗೋರೆಗಾಂವ್‌ ಪೊಲೀಸ್‌ ಠಾಣೆಯಲ್ಲಿ ಸುಲಿಗೆ ಪ್ರಕರಣ ದಾಖಲಿಸಿದ್ದರು. ಇದರ ತನಿಖೆ ವೇಳೆ ಪಟೇಲ್‌ ಪಾತ್ರವು ಬೆಳಕಿಗೆ ಬಂದಿದೆ ಎಂದು ಅಧಿಕಾರಿ ಹೇಳಿದರು. 

ಮುಂಬೈ ಪೊಲೀಸರು ಪಟೇಲ್‌ಗಾಗಿ ಶೋಧ ಆರಂಭಿಸಿದರು. ಮೆಹ್ಸಾನಾದಲ್ಲಿ ದೊರೆತ ಮಾಹಿತಿಯನ್ನಾಧರಿಸಿ ಅಲ್ಲಿಗೆ ತೆರಳಿದ ಪೊಲೀಸ್‌ ತಂಡವು ಪಟೇಲ್ ಅವರನ್ನು ಬಂಧಿಸಿತು. ಆರೋಪಿಯನ್ನು ಬುಧವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಶುಕ್ರವಾರದವರೆಗೆ ಆತನನ್ನು ಪೊಲೀಸ್‌ ವಶಕ್ಕೆ ನೀಡಿದ್ದು ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು