ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್ ವಾಜೆ ಬಂಧನ ಪ್ರಕರಣ: ಉದ್ಧವ್ ಠಾಕ್ರೆ ಭೇಟಿಯಾದ ಮುಂಬೈ ಪೊಲೀಸ್ ಆಯುಕ್ತ

Last Updated 17 ಮಾರ್ಚ್ 2021, 6:19 IST
ಅಕ್ಷರ ಗಾತ್ರ

ಮುಂಬೈ: ಉದ್ಯಮಿ ಮುಕೇಶ್‌ ಅಂಬಾನಿ ಅವರ ಮನೆ ಬಳಿ ಸ್ಫೋಟಕಗಳಿದ್ದ ವಾಹನ ಪತ್ತೆ ಪ್ರಕರಣದ ಆರೋಪ ಎದುರಿಸುತ್ತಿದ್ದ ಮುಂಬೈ ಪೊಲೀಸ್‌ ಅಧಿಕಾರಿ ಸಚಿನ್‌ ವಾಜೆ ಅವರ ಬಂಧನದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ‘ವರ್ಷಾ‘ ನಿವಾಸದಲ್ಲಿ ಮಂಗಳವಾರ ರಾತ್ರಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಸಚಿನ್‌ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ) ಮಾ.13ರಂದು ವಶಕ್ಕೆ ಪಡೆದಿತ್ತು. ಅಲ್ಲಿಯವರೆಗೆ ವಾಜೆ ಅವರು ಮುಂಬೈ ನಗರ ಪೊಲೀಸ್ ಕ್ರೈಮ್ ಬ್ರ್ಯಾಂಚ್‌ನ ಕ್ರೈಮ್ ಇಂಟೆಲಿಜೆನ್ಸ್ ಯೂನಿಟ್‌(ಸಿಐಉ) ಘಟಕದಲ್ಲೇ ಕಾರ್ಯನಿರ್ವಹಿಸುತ್ತಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಾಯಕ ಪೊಲೀಸ್ ಆಯುಕ್ತರೂ ಸೇರಿದಂತೆ ಅಪರಾಧ ವಿಭಾಗದ ಏಳು ಅಧಿಕಾರಿಗಳ ಹೇಳಿಕೆಗಳನ್ನುಎನ್‌ಐಎ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT