ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬುಲ್ಲಿ ಬಾಯ್’ಆ್ಯಪ್‌ ವಿವಾದ: ಮುಂಬೈನಲ್ಲಿ ಬೆಂಗಳೂರು ಮೂಲದ ಯುವಕನ ವಿಚಾರಣೆ

Last Updated 3 ಜನವರಿ 2022, 16:19 IST
ಅಕ್ಷರ ಗಾತ್ರ

ಮುಂಬೈ: ವಿವಾದಿತ ‘ಬುಲ್ಲಿ ಬಾಯ್’ಆ್ಯಪ್‌ಗೆ ಸಂಬಂಧಿಸಿದಂತೆ ಮುಂಬೈನ ಸೈಬರ್ ಸೆಲ್ಪೊಲೀಸರು ಬೆಂಗಳೂರು ಮೂಲದ 21 ವರ್ಷದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಎಎನ್‌ಐ ಟ್ವೀಟ್ ಮಾಡಿದೆ.


ಈ ಆ್ಯಪ್‌ಗೆ 100ಕ್ಕೂ ಹೆಚ್ಚು ಪ್ರಭಾವಿ ಮುಸ್ಲಿಂ ಮಹಿಳೆಯರ ಭಾವಚಿತ್ರಗಳನ್ನುಅಪ್‌ಲೋಡ್‌ ಮಾಡಿ ಇವರನ್ನು ಹರಾಜಿಗಿಡಲಾಗಿದೆ ಎಂಬ ಒಕ್ಕಣೆಯೊಂದಿಗೆ ಅವಹೇಳನ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

ಈ ಸಂಬಂಧ ಪತ್ರಕರ್ತೆಯೊಬ್ಬರು ನೀಡಿರುವ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಭಾನುವಾರ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಕುರಿತು ಮುಂಬೈನ ಸೈಬರ್‌ ಕ್ರೈಂ ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ. ಬಳಿಕ ಈ ಆ್ಯಪ್‌ ಅನ್ನು ನಿರ್ಬಂಧಿಸಲಾಗಿದೆ.

‘ಬುಲ್ಲಿ ಬಾಯಯ್’ ಆ್ಯಪ್‌ ಅನ್ನು ನಿರ್ಬಂಧಿಸಿರುವುದಾಗಿ ಗಿಟ್‌ಹಬ್‌ ವೇದಿಕೆಯು ದೃಢಪಡಿಸಿದೆ. ಈ ಕುರಿತು ಕಂಪ್ಯೂಟರ್‌ ತುರ್ತು ಪ್ರತಿಸ್ಪಂದನಾ ತಂಡ (ಸಿಇಆರ್‌ಟಿ) ಹಾಗೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್‌ ಟ್ವೀಟ್‌ ಮಾಡಿದ್ದಾರೆ.

ಈ ವಿಚಾರವಾಗಿ ದೆಹಲಿ ಮತ್ತು ಮುಂಬೈ ಪೊಲೀಸರ ಜೊತೆ ಕೇಂದ್ರ ಸರ್ಕಾರವು ಸಮನ್ವಯತೆಯಿಂದ ಕೆಲಸ ಮಾಡುತ್ತಿದೆ ಎಂದೂ ಸಚಿವರು ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT