ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಸೇನಾ ಕಾರ್ಯಕರ್ತರ ಪ್ರತಿಭಟನೆ: ಮುಂಬೈನಲ್ಲಿ 144 ಸೆಕ್ಷನ್ ಜಾರಿ

Last Updated 25 ಜೂನ್ 2022, 12:39 IST
ಅಕ್ಷರ ಗಾತ್ರ

ಮುಂಬೈ: ಬಂಡಾಯ ಶಾಸಕರ ವಿರುದ್ಧ ಶಿವಸೇನಾ ಕಾರ್ಯಕರ್ತರಿಂದ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಮುಂಬೈ ಮಹಾನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಶಿವಸೇನಾದ ಬಂಡಾಯ ಶಾಸಕರು ಥಾಣೆಯಲ್ಲಿ ಇಂದು ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ ಅವರು ಶಿವಸೇನಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆ ನಡೆಸಲಿದ್ದಾರೆ.

ಈ ಬೆಳವಣಿಗಳ ಹಿನ್ನೆಲೆಯಲ್ಲಿ ಶಿವಸೇನಾ ಕಾರ್ಯಕರ್ತರು ಬೀದಿಗಿಳಿಯುವ ಸಾಧ್ಯತೆ ಇದ್ದು, ಮುಂಬೈ ನಗರದಾದ್ಯಂತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಸದ್ಯ ಶಿವಸೇನಾ, ಕಾಂಗ್ರೆಸ್‌ ಮತ್ತು ಎನ್‌ಸಿಪಿ ಪಕ್ಷಗಳನ್ನೊಳಗೊಂಡ ಮಹಾ ವಿಕಾಸ್‌ ಆಘಾಡಿ ಮೈತ್ರಿಕೂಟ ಅಧಿಕಾರದಲ್ಲಿದೆ. ಸದ್ಯ ಶಿವಸೇನಾದಲ್ಲಿ ಬಿಕ್ಕಟ್ಟು ಬಿಗಡಾಯಿಸಿದೆ. ಶಾಸಕ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನಾದ ಕನಿಷ್ಠ 38 ಶಾಸಕರು ಮತ್ತು 10 ಪಕ್ಷೇತರರು ಅಸ್ಸಾಂನ ಗುವಾಹಟಿಯ ಹೋಟೆಲ್‌ವೊಂದರಲ್ಲಿ ಬೀಡುಬಿಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿನ ಬಲಾಬಲ

288 ಸದಸ್ಯರನ್ನು ಒಳಗೊಂಡಿರುವ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನಾ 55 ಶಾಸಕರ ಬಲ ಹೊಂದಿದೆ. ಎನ್‌ಸಿಪಿ 53, ಕಾಂಗ್ರೆಸ್‌ನ 44, ಬಹುಜನ ವಿಕಾಸ ಆಘಾಡಿ 3, ಸಮಾಜವಾದಿ ಪಕ್ಷ, ಎಐಎಂಐಎಂ ಹಾಗೂ ಪ್ರಹಾರ್‌ ಜನಶಕ್ತಿ ಪಾರ್ಟಿಯ ತಲಾ ಇಬ್ಬರು ಶಾಸಕರಿದ್ದಾರೆ.

ಎಂಎನ್‌ಎಸ್‌, ಸಿಪಿಐ (ಎಂ), ಪಿಡಬ್ಲ್ಯುಪಿ, ಸ್ವಾಭಿಮಾನಿ ಪಕ್ಷ, ರಾಷ್ಟ್ರೀಯ ಸಮಾಜ ಪಾರ್ಟಿ, ಜನಸೂರ್ಯ ಶಕ್ತಿ ಪಾರ್ಟಿ ಹಾಗೂ ಕ್ರಾಂತಿಕಾರಿ ಶೆತಕರಿ ಪಕ್ಷದಿಂದ ತಲಾ ಒಬ್ಬರು ಶಾಸಕರಿದ್ದಾರೆ. 13 ಮಂದಿ ಪಕ್ಷೇತರ ಶಾಸಕರು ಹಾಗೂ ವಿರೋಧ ಪಕ್ಷ ಬಿಜೆಪಿಯಲ್ಲಿ 106 ಶಾಸಕರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT