ಶನಿವಾರ, ಜುಲೈ 2, 2022
25 °C

ಮುಂಬೈನಲ್ಲಿ ಭಯೋತ್ಪಾದನಾ ದಾಳಿ ಭೀತಿ; ಪೊಲೀಸ್ ಕಟ್ಟೆಚ್ಚರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈನಲ್ಲಿ ವರ್ಷಾಂತ್ಯದಲ್ಲಿ (ಡಿ.31) ಭಯೋತ್ಪಾದನಾ ದಾಳಿ ನಡೆಸಲು ಖಲಿಸ್ತಾನ ಉಗ್ರರು ಸಂಚು ರೂಪಿಸಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ.

ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಟ್ವೀಟಿಸಿದೆ. ಭಯೋತ್ಪಾದನಾ ದಾಳಿ ಭೀತಿ ಹಿನ್ನೆಲೆಯಲ್ಲಿ ನಾಳೆ (ಶುಕ್ರವಾರ) ವಾರದ ರಜೆ ಸೇರಿದಂತೆ ರಜೆಯಲ್ಲಿರುವ ಎಲ್ಲ ಪೊಲೀಸರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

 

 

 

ವಾಣಿಜ್ಯ ನಗರಿಯಲ್ಲಿ ದಾಳಿ ಭೀತಿ ಹಿನ್ನೆಲೆಯಲ್ಲಿ ಪ್ರಮುಖ ನಿಲ್ದಾಣಗಳಾದ ದಾದರ್, ಬಾಂದ್ರಾ, ಚರ್ಚ್‌ಗೇಟ್, ಸಿಎಸ್‌ಎಂಟಿ, ಕುರ್ಲಾ ಮತ್ತು ಇತರೆ ನಿಲ್ದಾಣಗಳಲ್ಲಿ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಮುಂಬೈ ಪೊಲೀಸ್ ಆಯುಕ್ತ (ಮುಂಬೈ ರೈಲ್ವೆ) ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು