ಮಂಗಳವಾರ, ಮಾರ್ಚ್ 2, 2021
19 °C

ಮಾನಹಾನಿ ಪ್ರಕರಣ: ನಟಿ ಕಂಗನಾಗೆ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ:‌ ಖ್ಯಾತ ಲೇಖಕ ಮತ್ತು ಗೀತ ರಚನೆಕಾರ ಜಾವೇದ್ ಅಖ್ತರ್ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಕಂಗನಾ ರನೌತ್ ಅವರಿಗೆ ಮುಂಬೈ ಪೊಲೀಸರು ನೋಟಿಸ್‌ ಜಾರಿ ಮಾಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಂಗನಾ ಅವರಿಗೆ ಶುಕ್ರವಾರ ಇಲ್ಲಿನ ಜುಹು ಪೊಲೀಸರ ಮುಂದೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಿವಿ ಸಂದರ್ಶನಗಳಲ್ಲಿ ತನ್ನ ವಿರುದ್ಧ ಮಾನಹಾನಿ ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ ಎಂದು ಆಕ್ಷೇಪಿಸಿರುವ ಅಖ್ತರ್‌ ಅವರು, ಕಳೆದ ವರ್ಷದ ನವೆಂಬರ್‌ ತಿಂಗಳಲ್ಲಿ ಕಂಗನಾ ವಿರುದ್ಧ ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು.

ಕಳೆದ ವರ್ಷ ಜೂನ್‌ನಲ್ಲಿ ಸಾವನ್ನಪ್ಪಿದ ಬಾಲಿವುಡ್ ನಟ ಸುಶಾಂತ್ ಸಿಂಗ್‌ ಪ್ರಕರಣದಲ್ಲಿ ಕಂಗನಾ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿದ್ದರು ಎಂದು ಅಖ್ತರ್ ದೂರಿದ್ದಾರೆ. ನಟ ಹೃತಿಕ ರೋಷನ್‌ ಜತೆಗಿನ ಸಂಬಂಧ ಬಗ್ಗೆ ಮೌನವಾಗಿರಲು ಬೆದರಿಕೆ ಹಾಕಿದ್ದೇರೆಂದು ಸುಳ್ಳು ಆರೋಪ ಮಾಡಿದ್ದಾಗಿ ಅಖ್ತರ್ ದೂರಿನಲ್ಲಿ ತಿಳಿಸಿದ್ದಾರೆ. ಇದರಿಂದ ಸಾರ್ವಜನಿಕ ಜೀವನದಲ್ಲಿನ ನನ್ನ ಗೌರವಕ್ಕೆ ಚ್ಯುತಿ ಬಂದಿದೆ ಎಂದು ದೂರಿದ್ದಾರೆ. ‌

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು