ಗುರುವಾರ , ಆಗಸ್ಟ್ 18, 2022
26 °C

ಕೋವಿಡ್‌–19: ಮುಂಬೈನಲ್ಲಿ 1,898 ಹೊಸ ಪ್ರಕರಣ ಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ನಗರದಲ್ಲಿ ಕೋವಿಡ್‌–19 ದೃಢಪಟ್ಟ 1,898 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರಿಬ್ಬರು ಮೃತಪಟ್ಟಿದ್ದಾರೆ ಎಂದು ಮುಂಬೈ ಮಹಾನಗರ ಪಾಲಿಕೆ ಪ್ರಕಟಿಸಿದೆ.

ಮಹಾರಾಷ್ಟ್ರದ ರಾಜಧಾನಿಯಾಗಿರುವ ಮುಂಬೈನಲ್ಲಿ ಇದರೊಂದಿಗೆ ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 11,03,760ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 19,591ಕ್ಕೆ ತಲುಪಿದೆ.

ಗುರುವಾರಕ್ಕೆ ಹೋಲಿಸಿದರೆ, ಇಂದು 581 ಕಡಿಮೆ ಪ್ರಕರಣಗಳು ವರದಿಯಾಗಿವೆ. ಗುರುವಾರ ಒಟ್ಟು 2,479 ಹೊಸ ಪ್ರಕರಣಗಳು ಪತ್ತೆಯಾಗಿದ್ದವು ಮತ್ತು ಒಬ್ಬರು ಮೃತಪಟ್ಟಿದ್ದರು. ನಗರದಲ್ಲಿ ಸದ್ಯ 13,257 ಸಕ್ರಿಯ ಪ್ರಕರಣಗಳು ಇವೆ. ಇಲ್ಲಿನ ಆಸ್ಪತ್ರೆಗಳಲ್ಲಿ ಒಟ್ಟು 77 ಮಂದಿಗೆ ಆಮ್ಲಜನಕದ ನೆರವು ನೀಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪಾಲಿಕೆಯ ಮಾಹಿತಿ ಪ್ರಕಾರ, ಇಂದು ಚೇತರಿಸಿಕೊಂಡಿರುವ 2,253 ಮಂದಿಯೂ ಸೇರಿದಂತೆ ಈವರೆಗೆ 10,70,912 ಸೋಂಕಿತರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ 97ರಷ್ಟಿದೆ.

ಇವನ್ನೂ ಓದಿ


ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು