ಬುಧವಾರ, ಮೇ 18, 2022
26 °C

ಮುಂಬೈನಲ್ಲಿ ಕಟ್ಟಡ ಕುಸಿತ; 11 ಸಾವು, 18 ಮಂದಿಯ ರಕ್ಷಣೆ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ಮುಂಬೈನ 'ಮಲಾಡ್ ವೆಸ್ಟ್‌ನ ನ್ಯೂ ಕಲೆಕ್ಟರ್ ಕಂಪೌಡ್‌'ನಲ್ಲಿ ಬುಧವಾರ ತಡರಾತ್ರಿ ವಸತಿ ಕಟ್ಟಡ ಕುಸಿದು ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ ಎಂದು 'ಬೃಹನ್‌ಮುಂಬೈ ಮುನ್ಸಿಪಲ್‌ ಕಾರ್ಪೊರೇಷನ್‌ (ಬಿಎಂಸಿ)' ಮಾಹಿತಿ ನೀಡಿದೆ.

ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಬಿಎಂಸಿ ತಿಳಿಸಿದೆ.

ಗಾಯಾಳುಗಳನ್ನು ಹತ್ತಿರದ ಬಿಡಿಬಿಎ ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: 

ಮಹಿಳೆಯರು, ಮಕ್ಕಳು ಸೇರಿದಂತೆ 18 ಮಂದಿಯನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡ ಅವಶೇಷಗಳ ಅಡಿಯಲ್ಲಿ ಹೆಚ್ಚಿನ ಜನರು ಸಿಲುಕಿಕೊಳ್ಳುವ ಸಾಧ್ಯತೆಯಿದೆ. ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ, ವಲಯ 11) ವಿಶಾಲ್ ಠಾಕೂರ್ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಮಹಾರಾಷ್ಟ್ರ ಸಚಿವ ಅಸ್ಲಂ ಶೇಖ್ ತಲುಪಿದ್ದು, ಮಳೆಯಿಂದಾಗಿ ಕಟ್ಟಡ ಕುಸಿತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದ್ದು, ಗಾಯಾಳುಗಳ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ ಎಂದಿದ್ದಾರೆ.

ಬುಧವಾರ ರಾತ್ರಿ 10ರ ಹೊತ್ತಿಗೆ ಘಟನೆ ನಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹಿಂದಿನ ದಿನ ಮುಂಬೈನಲ್ಲಿ ಭಾರಿ ಮಳೆಯಾಗಿತ್ತು. ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು