ಮಂಗಳವಾರ, ಅಕ್ಟೋಬರ್ 27, 2020
25 °C

ಮುಂಬೈ: 24 ತಾಸಿನಲ್ಲಿ 286 ಮಿ.ಮೀ ಮಳೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕಳೆದ 24 ಗಂಟೆಗಳಲ್ಲಿ ಮುಂಬೈನಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ಹಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

ಸಾಂತಾಕ್ರೂಜ್‌ನಲ್ಲಿ 286.4 ಮಿ.ಮೀ ಮತ್ತು ದಕ್ಷಿಣ ಮಂಬೈನ ಕೊಲಾಬಾದಲ್ಲಿ 147.8 ಮಿ.ಮೀ ಮಳೆ ಸುರಿದಿದೆ. ಇದು ಈ ಮುಂಗಾರು ಋತುವಿನಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ ಎಂದು ಮುಂಬೈನ ಐಎಂಡಿ ಕೇಂದ್ರದ ಉಪ ಮಹಾನಿರ್ದೇಶಕ ಕೆ.ಎಸ್‌ ಹೊಸಲಿಕರ್‌ ಅವರು ತಿಳಿಸಿದರು.

ಮುಂಬೈ ಮತ್ತು ಉಪನಗರಗಳಲ್ಲಿ ಬುಧವಾರವೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು