ಶುಕ್ರವಾರ, ಜೂನ್ 18, 2021
23 °C

ಮುಂಬೈನ ಮೈದಾನಗಳಲ್ಲಿ ಬೃಹತ್‌ ಲಸಿಕೆ ಅಭಿಯಾನ –ಮಹಾ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಕೋವಿಡ್‌ ಲಸಿಕೆ ವಿತರಣೆಗೆ ವೇಗ ನೀಡಿರುವ ಮಹಾರಾಷ್ಟ್ರ ಸರ್ಕಾರ ಮುಂದಿನ 24 ಗಂಟೆಗಳಲ್ಲಿ ಮುಂಬೈನಲ್ಲಿ ಬೃಹತ್‌ ಲಸಿಕಾ ಕೇಂದ್ರಗಳನ್ನು ತೆರೆಯುವಂತೆ ಸ್ಥಳೀಯ ಆಡಳಿತಕ್ಕೆ ಸೂಚಿಸಿದೆ.

ಕ್ರೀಡಾಂಗಣಗಳು, ಬೃಹತ್ ವೈದಾನಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಮುಂಬೈ ಮಹಾನಗರ ಪಾಲಿಕೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅಂಧೇರಿ ಸ್ಪೋರ್ಟ್ಸ್ ಕ್ಲಬ್, ಕೂಪರೇಜ್ ಮೈದಾನ, ಶಿವಾಜಿ ಸ್ಟೇಡಿಯಂ, ಓವಲ್ ಮೈದಾನ, ಬ್ರಬೋರ್ನ್ ಸ್ಟೇಡಿಯಂ, ಎಂಐಜಿ ಮೈದಾನ, ಎಂಸಿಎ ಮೈದಾನ, ರಿಲಾಯನ್ಸ್ ಜಿಯೋ ಗಾರ್ಡನ್ ಹಾಗೂ ವಾಂಖೇಡೆ ಸ್ಟೇಡಿಯಂ ನಲ್ಲಿ ಬೃಹತ್‌ ಲಸಿಕೆ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಬೃಹತ್‌ ಮೈದಾನಗಳಲ್ಲಿ ಲಸಿಕೆಗಾಗಿ ಬರುವ ಜನರು ಅಂತರ ಕಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಹಾಗೂ ಜನಜಂಗುಳಿಯ ಸಮಸ್ಯೆ ಇರುವುದಿಲ್ಲ. ಇದರಿಂದ ಸೋಂಕು ಪ್ರಸರಣವನ್ನು ತಡೆಯಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದವಾರ ದಾದರ್‌ ಮೈದಾನದಲ್ಲಿ ನಡೆದ ಇಂತಹ ಪ್ರಯೋಗ ಯಶಸ್ವಿಯಾಗಿದೆ. ಅಲ್ಲಿ ನಿತ್ಯ 5 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಅಗತ್ಯ ವೈದ್ಯಕೀಯ ಸುರಕ್ಷತೆ ಮಾನದಂಡಗಳನ್ನು ಅಳವಡಿಸಿಕೊಂಡು ಲಸಿಕೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಸಿಕೆಗಳ ಕೊರತೆಯ ನಡುವೆ ಮಹಾರಾಷ್ಟ್ರ ಸರ್ಕಾರ ಬೃಹತ್‌ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದೆ. ದಿನದ 24 ಗಂಟೆಯು ಲಸಿಕೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು