ಮುಂಬೈ: ಇಲ್ಲಿನ ಸಾಕಿ ನಾಕಾ ಪ್ರದೇಶದಲ್ಲಿ ಭೀಕರವಾಗಿ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆ 33 ಗಂಟೆ ಸಾವು ಬದುಕಿನ ನಡುವೆ ಹೋರಾಡಿ ಮೃತಳಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಾಟ್ಕೋಪರ್‌ನಲ್ಲಿರುವ ರಾಜವಾಡಿ ಆಸ್ಪತ್ರೆಗೆ ಸಂತ್ರಸ್ತೆಯನ್ನು ದಾಖಲಿಸಿ, ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಆದರೂ ಚಿಕಿತ್ಸೆ ಫಲಿಸದೇ ಸಂತ್ರಸ್ತೆ ಮೃತಪಟ್ಟಿದ್ದಾಳೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸಾಕಿ ನಾಕಾ ಪ್ರದೇಶದಲ್ಲಿ ಕಳೆದ ಶುಕ್ರವಾರ 34 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಯೊಬ್ಬ ಶುಕ್ರವಾರ ಬೀಕರ ಅತ್ಯಾಚಾರ ಎಸಗಿದ್ದ,ಚಲಿಸುತ್ತಿದ್ದ ಟೆಂಪೊವೊಂದರಲ್ಲಿ ಈ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದರು.
ನಿರ್ಭಯಾ ಪ್ರಕರಣದಂತೆ ಈ ಪ್ರಕರಣದಲ್ಲೂ ಕ್ರೌರ್ಯದ ಪರಾಕಾಷ್ಠೆಯನ್ನು ಮೆರೆಯಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿತ್ತು.ಆರೋಪಿಯು ಮಹಿಳೆಯ ಖಾಸಗಿ ಭಾಗಕ್ಕೆ ಕಬ್ಬಿಣದ ಸಲಾಕೆ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾಗಿ ತಿಳಿದುಬಂದಿದೆ.
ಈ ಕೃತ್ಯವು ಒಬ್ಬ ವ್ಯಕ್ತಿಯಿಂದ ಎಸಗಲ್ಪಟ್ಟಿದೆಯೇ ಅಥವಾ ಇದು ಸಾಮೂಹಿಕ ಅತ್ಯಾಚಾರವೇ ಎಂಬುದು ತನಿಖೆಯಿಂದ ಹೊರಬರಬೇಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 307, 376, 323, ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.