ಶನಿವಾರ, ಫೆಬ್ರವರಿ 4, 2023
21 °C

ಟಿಆರ್‌ಎಸ್‌ ಸರ್ಕಾರ ಉರುಳಿಸುತ್ತೇವೆ: ಅಮಿತ್‌ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ತೆಲಂಗಾಣದ ಟಿ.ಆರ್‌. ಚಂದ್ರಶೇಖರ್‌ ರಾವ್‌ ನೇತೃತ್ವದ ಸರ್ಕಾರ ಕಿತ್ತೊಗೆಯುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಇಲ್ಲಿ ಹೇಳಿದರು.

ಹೈದರಾಬಾದ್‌ನ ಬೇಗುಂಪೇಟ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್‌ ಶಾ, ಸಿಕಂದರಾಬಾದ್‌ನ ಉಜ್ಜಯಿನಿ ಮಹಾಂಕಾಳಿ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮುನುಗೋಡು ಉಪಚುನಾವಣೆಯ ಗೆಲುವು ತೆಲಂಗಾಣದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಆರಂಭದ ಹೆಜ್ಜೆಯಾಗಲಿದೆ. ಟಿಆರ್‌ಎಸ್‌ ಸರ್ಕಾರ ಉರುಳಿಸುವ ಪ್ರಕ್ರಿಯೆ ಆರಂಭವಾಗಿದೆ. ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದರು.

ಮುನುಗೋಡು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೊಮಟಿ ರೆಡ್ಡಿ ರಾಜಗೋಪಾಲ್ ರೆಡ್ಡಿ ರಾಜೀನಾಮೆ ನೀಡಿದ್ದು, ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಈ ಕ್ಷೇತ್ರದ ಉಪ ಚುನಾವಣೆಗೆ ರಾಜಗೋಪಾಲ್‌ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್‌ ಮತ್ತು ಟಿಆರ್‌ಎಸ್ ಇನ್ನೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ. 

ಅಮಿತ್‌ ಶಾ ಅವರ ಭೇಟಿಗೂ ಒಂದು ದಿನ ಮೊದಲು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಪಶ್ಚಿಮ ತೆಲಂಗಾಣ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಿದರು. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು