ಗುರುವಾರ , ಜೂನ್ 30, 2022
22 °C

ಗುಂಟೂರು: ಪ್ರೀತಿ ನಿರಾಕರಿಸಿದ ಯುವತಿ ಕೊಲೆಗೈದ ವ್ಯಕ್ತಿಗೆ ಗಲ್ಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಂಟೂರು: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಹಾಡಹಗಲೇ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವತಿಯನ್ನು ಹತ್ಯೆ ಮಾಡಿದ್ದ ಶಶಿಕೃಷ್ಣ ಎಂಬ ವ್ಯಕ್ತಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ. 2021ರ ಆಗಸ್ಟ್ 15ರಂದು ರಮ್ಯಾ ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಕೊಂದು ಹಾಕಿದ್ದ.

ಈ ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಆತನನ್ನು ಜೈಲಿಗೆ ಕಳುಹಿಸಿದ್ದರು.

ಈ ಪ್ರಕರಣವನ್ನು ಅಪರೂಪದಲ್ಲೇ ಅಪರೂಪ ಎಂದು ಪರಿಗಣಿಸಿದ ಗುಂಟೂರಿನ ವಿಶೇಷ ನ್ಯಾಯಾಲಯವು ಶುಕ್ರವಾರ ತಪ್ಪಿತಸ್ಥ ವ್ಯಕ್ತಿಗೆ ಗಲ್ಲು ಶಿಕ್ಷೆ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು