ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್‌ ಮೆಟ್ಟಿಲೇರದೆಯೇ ಮುಸ್ಲಿಂ ಮಹಿಳೆ ವಿಚ್ಛೇದನ ಪಡೆಯಬಹುದು: ಕೇರಳ ಹೈಕೋರ್ಟ್

Last Updated 14 ಏಪ್ರಿಲ್ 2021, 15:56 IST
ಅಕ್ಷರ ಗಾತ್ರ

ಕೊಚ್ಚಿ: ಮುಸ್ಲಿಂ ಮಹಿಳೆಯರು ನ್ಯಾಯಾಲಯದ ಮೊರೆ ಹೋಗದೆಯೇ ವಿವಾಹ ವಿಚ್ಛೇದನ ಪಡೆದುಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಕೇರಳ ಹೈಕೋರ್ಟ್‌ನ ವಿಭಾಗೀಯ ಪೀಠ ತೀರ್ಪು ನೀಡಿದೆ.

ನ್ಯಾಯಾಂಗ ಪ್ರಕ್ರಿಯೆಗೆ ಒಳಗಾಗದೇ ಮುಸ್ಲಿಂ ಮಹಿಳೆಯರು ವಿಚ್ಛೇದನ ಪಡೆಯುವುದನ್ನು ನಿಷೇಧಿಸಿ 1972ರಲ್ಲಿ ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ವಿಭಾಗೀಯ ಪೀಠ ರದ್ದು ಮಾಡಿದೆ.

‘ಕೆ.ಸಿ.ಮೊಯೀನ್‌ ವಿರುದ್ಧ ನಫೀಸಾ ಮತ್ತಿತರರು’ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠ, ಕೋರ್ಟ್‌ ಮೊರೆ ಹೋಗದೆಯೇ ವಿಚ್ಛೇದನ ಪಡೆಯುವ ಹಕ್ಕನ್ನು ಮಹಿಳೆಗೆ ನಿರಾಕರಿಸಿತ್ತು’ ಎಂದು ನ್ಯಾಯಮೂರ್ತಿಗಳಾದ ಎ.ಮುಹಮ್ಮದ್‌ ಮುಸ್ತಾಕ್‌ ಹಾಗೂ ಸಿ.ಎಸ್‌.ಡಯಾಸ್‌ ಅವರಿರುವ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

‘ವಿಚ್ಛೇದನ ಪಡೆಯುವುದಕ್ಕೆ ಸಂಬಂಧಿಸಿ ಮಹಿಳೆ ಹಾಗೂ ಪುರುಷರು ಸಮಾನ ಹಕ್ಕು ಹೊಂದಿದ್ದಾರೆ ಎಂಬುದನ್ನು ಕುರಾನ್‌ ಮಾನ್ಯ ಮಾಡುತ್ತದೆ’ ಎಂದು ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT