ಮಂಗಳವಾರ, ಜನವರಿ 19, 2021
27 °C

ರೂಪಾಂತರ ಕೋವಿಡ್‌: ದೇಶದಲ್ಲಿ ಸೋಂಕಿತರ ಸಂಖ್ಯೆ 90ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಈವರೆಗೆ 90 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್‌ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ಜನವರಿ 6ರ ತನಕ 76 ಮಂದಿಯಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್‌ ಪತ್ತೆಯಾಗಿತ್ತು. ಆದರೆ ಶನಿವಾರಕ್ಕೆ ಈ ಪ್ರಕರಣಗಳ ಸಂಖ್ಯೆ 90ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.

ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ. ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸೋಂಕು ಪ್ರಸರಣನ್ನು ತಡೆಯುವ ನಿಟ್ಟಿನಲ್ಲಿ ಕಣ್ಗಾವಲು ಮತ್ತು ನಿಯಂತ್ರಣ ಕ್ರಮಗಳನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಸಲಹೆ ನೀಡಲಾಗಿದೆ. ಅಲ್ಲದೇ ಮಾದರಿಗಳನ್ನು ಐಎನ್‌ಎಸ್‌ಎಸಿಓಜಿ ಪ್ರಯೋಗಾಲಯಕ್ಕೆ ಕಳುಹಿಸುವಂತೆ ಸೂಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು