ನಾಗಪುರ: ‘ಶಿವಸೇನಾ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರವು ಮಹಾರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಕಡು ಭ್ರಷ್ಟ ಸರ್ಕಾರ. ಸುಲಿಗೆಯನ್ನೇ ಕಾರ್ಯಸೂಚಿಯನ್ನಾಗಿ ಮಾಡಿಕೊಂಡು ಆಡಳಿತ ನಡೆಸುತ್ತಿದೆ’ ಎಂದು ಬಿಜೆಪಿ ಹಿರಿಯ ನಾಯಕ ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹರಿಹಾಯ್ದಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಫಡಣವೀಸ್, ‘ಅಪ್ರಾಮಾಣಿಕತೆಯಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಬಿಜೆಪಿ ಈಗಲೂ ಮೊದಲ ಸ್ಥಾನದಲ್ಲಿದೆ‘ ಎಂದು ಹೇಳಿದರು.

ಶಿವಸೇನಾ ಆಯೋಜಿಸಿದ್ದ ವಾರ್ಷಿಕ ದಸರಾ ಮೆರವಣಿಗೆಯಲ್ಲಿ ಉದ್ಧವ್ ಠಾಕ್ರೆ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾರನೇ ದಿನ ಫಡಣವೀಸ್ ಅವರು ಈ ವಾಗ್ದಾಳಿ ನಡೆಸಿದ್ದಾರೆ.

‘ಠಾಕ್ರೆಯವರ ಭಾಷಣ ಅವರಲ್ಲಿರುವ ಹತಾಶೆಯನ್ನು ತೋರಿಸುತ್ತದೆ. ಬಿಜೆಪಿ ವರ್ಚಸ್ಸಿಗೆ ಮಸಿ ಬಳಿಯಲು ನೀವು ಯತ್ನಿಸಬಹುದು. ಆದರೆ ನಮ್ಮ ಪಕ್ಷ ದೃಢವಾಗಿ ನೆಲೆಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ನಂಬರ್ ಒನ್ ಪಕ್ಷ ಎಂಬುದನ್ನು ನೀವು ಮರೆಯಬಾರದು‘ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.