ಭಾನುವಾರ, ಜೂನ್ 13, 2021
25 °C

ಬಂಗಾಳದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಬಿಜೆಪಿ ಸೈನಿಕನಾಗಿ ಹೋರಾಟ: ಮುಕುಲ್

ಪಿಟಿಐ‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ತೊರೆಯಲಿದ್ದಾರೆ ಎಂಬ ಊಹಾಪೋಹಗಳಿಗೆ ಇತಿ ಶ್ರೀ ಹಾಡಿರುವ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಹಾಗೂ ಹಿರಿಯ ಮುಖಂಡ ಮುಕುಲ್ ರಾಯ್, ಪಕ್ಷದ ಸೈನಿಕನಾಗಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಹೋರಾಟ ಮುಂದುವರಿಸುವುದಾಗಿ ಶನಿವಾರ ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಮುಕುಲ್ ರಾಯ್, ಬಂಗಾಳದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಬಿಜೆಪಿಯ ಓರ್ವ ಸೈನಿಕನಾಗಿ ನನ್ನ ಹೋರಾಟ ಮುಂದುವರಿಯಲಿದೆ. ಊಹಾಪೋಹಾಗಳಿಗೆ ವಿರಾಮ ಹಾಕಬೇಕೆಂದು ಎಲ್ಲರಿಗೂ ವಿನಂತಿಸುತ್ತೇನೆ. ನನ್ನ ರಾಜಕೀಯ ಹಾದಿಯಲ್ಲಿ ನಾನು ದೃಢ ನಿಶ್ಚಯದಿಂದ ಇದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ಹಿಂದೊಮ್ಮೆ ತೃಣಮೂಲ ಕಾಂಗ್ರೆಸ್‌ನ ಪ್ರಮುಖ ನಾಯಕತ್ವವನ್ನು ವಹಿಸಿದ್ದ ಮುಕುಲ್ ರಾಯ್, ಮಮತಾ ಬ್ಯಾನರ್ಜಿ ಆಪ್ತರಾಗಿ ಗುರುತಿಸಿಕೊಂಡಿದ್ದರು. ಬಳಿಕ 2017ರಲ್ಲಿ ಪಕ್ಷ ತೊರೆದು ಬಿಜೆಪಿಯನ್ನು ಸೇರ್ಪಡೆಗೊಂಡಿದ್ದರು.

ಇತ್ತೀಚೆಗಷ್ಟೇ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮುಕುಲ್ ರಾಯ್ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದರು.

ಮುಕುಲ್ ರಾಯ್ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹ ಶ್ಲಾಘಿಸಿದ್ದಾರೆ. ಅವರ ನಡೆ ಎಲ್ಲ ಬಿಜೆಪಿ ಕಾರ್ಯಕರ್ತರಿಗೂ ಆದರ್ಶಪ್ರಾಯವಾಗಿದ್ದು, ಎಲ್ಲರಿಗೂ ಮಾರ್ಗದರ್ಶನ ನೀಡಿ ಪಕ್ಷವನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು