ಭಾನುವಾರ, ಸೆಪ್ಟೆಂಬರ್ 26, 2021
23 °C

ಮಮತಾ ಬ್ಯಾನರ್ಜಿ ನೀಡುವ ಯಾವುದೇ ಜವಾಬ್ದಾರಿ ನಿರ್ವಹಿಸಲು ಸಿದ್ಧ: ಸುಶ್ಮಿತಾ ದೇವ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ತೃಣಮೂಲ ಕಾಂಗ್ರೆಸ್‌ಗೆ(ಟಿಎಂಸಿ) ಬೇಷರತ್ತಾಗಿ ಸೇರ್ಪಡೆಯಾಗಿದ್ದೇನೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನೀಡುವ ಯಾವುದೇ ಜವಾಬ್ದಾರಿಯನ್ನು ನಿರ್ವಹಿಸಲು ನಾನು ಸಿದ್ಧ’ ಎಂದು ಸುಶ್ಮಿತಾ ದೇವ್‌ ಅವರು ಮಂಗಳವಾರ ಹೇಳಿದರು.

ಟಿಎಂಸಿಯ ಹಿರಿಯ ನಾಯಕರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಡೆರೆಕ್ ಒ ಬ್ರಿಯನ್‌ ಅವರ ಉಪಸ್ಥಿತಿಯಲ್ಲಿ ಕೋಲ್ಕತ್ತದಲ್ಲಿ ಸುಶ್ಮಿತಾ ಅವರು ಸೋಮವಾರ ಟಿಎಂಸಿಗೆ ಸೇರಿದ್ದರು.

‘ಟಿಎಂಸಿಗೆ ಸೇರುವಾಗ ಯಾವುದೇ ಸಿದ್ಧಾಂತವನ್ನು ನಾನು ರಾಜಿ ಮಾಡಿಕೊಂಡಿಲ್ಲ. ನಾನು ಬೇಷರತ್ತಾಗಿ ಟಿಎಂಸಿಗೆ ಸೇರ್ಪಡೆಯಾಗಿದ್ದೇನೆ. ನನ್ನ 30 ವರ್ಷದ ರಾಜಕೀಯ ಜೀವನದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಯಾವುದೇ ಬೇಡಿಕೆ ಇಟ್ಟಿಲ್ಲ ’ ಎಂದು ವರದಿಗಾರರಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು