ಬುಧವಾರ, ಸೆಪ್ಟೆಂಬರ್ 22, 2021
23 °C

ನನ್ನ ಫೋನ್ ಕದ್ದಾಲಿಸಲಾಗುತ್ತಿದೆ: ರಾಹುಲ್ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೆಹಲಿ:  ‘ನನ್ನ ಎಲ್ಲಾ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ. ಗುಪ್ತಚರ ಇಲಾಖೆ ಅಧಿಕಾರಿಗಳು ನನಗೆ ಮತ್ತು ನನ್ನ ಸ್ನೇಹಿತರಿಗೆ ಕರೆ ಮಾಡುತ್ತಾರೆ. ನಿಮ್ಮ ಫೋನ್‌ಗಳನ್ನು ಕದ್ದಾಲಿಸುತ್ತಿದ್ದೇವೆ, ಎಚ್ಚರಿಕೆಯಿಂದಿರಿ ಎಂದು ಮಾಹಿತಿ ನೀಡುತ್ತಾರೆ. ನಾನು ಏನು ಮಾತನಾಡುತ್ತೇನೆ, ಏನು ಹೇಳುತ್ತೇನೆ ಎಂಬುದನ್ನು ನನ್ನ ಭದ್ರತಾ ಸಿಬ್ಬಂದಿ ಅವರ ಹಿರಿಯ ಅಧಿಕಾರಿಗಳಿಗೆ ಹೇಳಲೇಬೇಕು. ನನ್ನ ಫೋನ್‌ ಅನ್ನು ಕದ್ದಾಲಿಸುತ್ತಿಲ್ಲ ಎಂಬ ಭ್ರಮೆಯಲ್ಲಿ ನಾನು ಇಲ್ಲ’ ಎಂದು ರಾಹುಲ್ ಹೇಳಿದ್ದಾರೆ.

‘ಇದು ರಾಹುಲ್ ಗಾಂಧಿಯ ಖಾಸಗಿತನದ ವಿಷಯವಲ್ಲ. ಬದಲಿಗೆ ಜನರ ಧ್ವನಿಯನ್ನು ಹತ್ತಿಕ್ಕುತ್ತಿರುವ ವಿಚಾರ. ನಾನು ಪೆಗಾಸಸ್ ಗೂಢಚರ್ಯೆಯ ಸಂಭಾವ್ಯ ಗುರಿ ಅಲ್ಲ. ನನ್ನ ಫೋನ್‌ಗಳನ್ನು ಕದ್ದಾಲಿಸುತ್ತಿರುವುದು ನಿಜ’ ಎಂದು ಅವರು ಆರೋಪಿಸಿದ್ದಾರೆ. 

ಫೋನ್‌ ಅನ್ನು ತನಿಖಾ ಸಂಸ್ಥೆಗೆ ಒಪ್ಪಿಸಲಿ: ಬಿಜೆಪಿ ಸವಾಲು 

‘ಬಿಜೆಪಿ ಸರ್ಕಾರವು ಯಾರ ಫೋನನ್ನೂ ಕಾನೂನುಬಾಹಿರವಾಗಿ ಕದ್ದಾಲಿಸಿಲ್ಲ, ಗೂಢಚರ್ಯೆ ನಡೆಸಿಲ್ಲ. ರಾಹುಲ್ ಗಾಂಧಿ ಅವರು ಅತಮ್ಮ ಫೋನ್‌ ಅನ್ನು ಕದ್ದಾಲಿಸಲಾಗಿದೆ ಎಂದಿದ್ದಾರೆ. ಅದು ನಿಜವೇ ಆಗಿದ್ದರೆ ಅವರು ತಮ್ಮ ಫೋನ್‌ ಅನ್ನು ತನಿಖಾ ಸಂಸ್ಥೆಗೆ ಒಪ್ಪಿಸಲಿ. ಭಾರತೀಯ ದಂಡ ಸಂಹಿತೆಯ ನಿಯಮಗಳ ಪ್ರಕಾರ ತನಿಖೆ ನಡೆಯಲಿದೆ’ ಎಂದು ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಥೋಡ್ ಸವಾಲು ಹಾಕಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು