ಸೋಮವಾರ, ಅಕ್ಟೋಬರ್ 18, 2021
24 °C

ನನ್ನ ಮಗ ಆಶಿಶ್‌ ಮುಗ್ಧ, ನಾಳೆ ಪೊಲೀಸರ ಮುಂದೆ ಹಾಜರಾಗಲಿದ್ದಾನೆ: ಅಜಯ್‌ ಮಿಶ್ರಾ

ಪಿಟಿಐ Updated:

ಅಕ್ಷರ ಗಾತ್ರ : | |

ಲಖನೌ: ‘ನನ್ನ ಮಗ ಆಶಿಶ್‌ ಮಿಶ್ರಾ ಮುಗ್ಧ. ಆತ ನಾಳೆ (ಶನಿವಾರ)  ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾನೆ’ ಎಂದು ಕೇಂದ್ರ ಸಚಿವ ಅಜಯ್‌ ಮಿಶ್ರಾ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮಗೆ ಕಾನೂನಿನ ಮೇಲೆ ಸಂಪೂರ್ಣ ನಂಬಿಕೆ ಇದೆ. ನನ್ನ ಮಗ ನಿರಪರಾಧಿ. ಆತನಿಗೆ ಗುರುವಾರ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದರು. ಆದರೆ, ಆತನ ಆರೋಗ್ಯ ಸರಿ ಇರಲಿಲ್ಲ. ಈಗ ಆತ ಚೇತರಿಸಿಕೊಂಡಿದ್ದು, ನಾಳೆ ಪೊಲೀಸರ ಮುಂದೆ ಹಾಜರಾಗಿ ಹೇಳಿಕೆ ದಾಖಲಿಸುತ್ತಾನೆ’ ಎಂದು ಅಜಯ್‌ ಮಿಶ್ರಾ ತಿಳಿಸಿದ್ದಾರೆ.

ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಆಶಿಶ್‌ ಮಿಶ್ರಾಗೆ ಪೊಲೀಸರು ಸಮನ್ಸ್ ನೀಡಿದ್ದರು. ಆದರೆ, ಆಶಿಶ್‌ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಸದ್ಯ ಹೊಸ ಸಮನ್ಸ್‌ ನೀಡಿರುವ ಪೊಲೀಸರು ಶನಿವಾರ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಿದ್ದಾರೆ. ಜತೆಗೆ, ವಿಚಾರಣೆಗೆ ಹಾಜರಾಗದಿದ್ದರೆ ಆಶಿಶ್‌ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅ. 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು, ಒಬ್ಬ ಪತ್ರಕರ್ತ ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು. ಹಲವಾರು ಜನರು ಗಾಯಗೊಂಡಿದ್ದರು.

ಇದನ್ನೂ ಓದಿ... ಪ್ರತಿಪಕ್ಷ ನಾಯಕರ ಲಖಿಂಪುರ ಭೇಟಿ ಫೋಟೊ ರಾಜಕಾರಣವೆಂದ ಯೋಗಿ ಆದಿತ್ಯನಾಥ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು