ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಮೊಮ್ಮಗ, ಸಚಿವ ಉದಯನಿಧಿ ಅವರ ಮಗ ಇನ್ಬನಿಧಿ ಅವರು ತಮ್ಮ ಗೆಳತಿಯೊಂದಿಗೆ ಇರುವ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹಲವು ದಿನಗಳಿಂದ ಹರಿದಾಡುತ್ತಿದ್ದು, ಆಡಳಿತಾರೂಢ ಡಿಎಂಕೆಗೆ ಮುಜುಗರ ಉಂಟು ಮಾಡಿದೆ.
ಮಗನ ಫೋಟೊಗಳ ಬಗ್ಗೆ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಕ್ರೀಡೆ ಮತ್ತು ಯುವಜನ ಖಾತೆ ಸಚಿವ ಉದಯನಿಧಿ ಸ್ಟಾಲಿನ್, ‘ಅವನಿಗೆ 18 ವರ್ಷ ತುಂಬಿದೆ. ಅದು ಅವನ ವೈಯಕ್ತಿಕ ವಿಚಾರ’ ಎಂದು ಹೇಳಿದ್ದು, ಹೆಚ್ಚು ಮಾತನಾಡಲು ನಿರಾಕರಿಸಿದ್ದಾರೆ.
‘ವಯಸ್ಸಿಗೆ ಬಂದ ವ್ಯಕ್ತಿಯ ವೈಯಕ್ತಿಕ ಜೀವನದಲ್ಲಿ ಮಧ್ಯಪ್ರವೇಶಿಸಲು ನನಗೆ ಕೆಲವು ನಿರ್ಬಂಧಗಳಿವೆ’ ಎಂದು ಉದಯನಿಧಿ ಹೇಳಿದ್ದಾರೆ.
ಈ ಬಗ್ಗೆ ಮಗ, ಪತ್ನಿಯೊಂದಿಗೆ ಏನು ಚರ್ಚೆಯಾಗಿದೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದೂ ಉದಯನಿಧಿ ಹೇಳಿದ್ದಾರೆ.
ಇನ್ಬನಿಧಿ ಮತ್ತು ಅವರ ಗೆಳತಿಯ ಫೋಟೋಗಳು ಕಳೆದ ಜನವರಿಯಿಂದಲೂ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಆದರೆ ಇದರ ಬಗ್ಗೆ ಉದಯನಿಧಿ ಈ ವರೆಗೆ ಪ್ರತಿಕ್ರಿಯಿಸಿರಲಿಲ್ಲ. ಆದರೆ ಅವರ ಪತ್ನಿ ಕೃತಿಕಾ ಉದಯನಿಧಿ ಅವರು ಟ್ವೀಟ್ ಮಾಡಿದ್ದು, ‘ಪ್ರೀತಿಗೆ, ಅದರ ಅಭಿವ್ಯಕ್ತಿಗೆ ಯಾವುದೇ ನಿಷೇಧವಿಲ್ಲ’ ಎಂದು ಹೇಳುವ ಮೂಲಕ ಸಮರ್ಥನೆ ಮಾಡಿಕೊಂಡಿದ್ದರು.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.