ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್ಮಾರ್‌ನಲ್ಲಿ ಪ್ರತಿಭಟನಾಕಾರರ ವಿರುದ್ಧ ಅಶ್ರುವಾಯು

Last Updated 3 ಮಾರ್ಚ್ 2021, 11:17 IST
ಅಕ್ಷರ ಗಾತ್ರ

ಯಾಂಗೂನ್‌: ಮಿಲಿಟರಿ ಆಡಳಿತ ವಿರೋಧಿಸಿ ಮ್ಯಾನ್ಮಾರ್‌ನಲ್ಲಿ ಪ್ರತಿಭಟನೆ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಬುಧವಾರ ಪ್ರತಿಭಟನಾಕಾರರ ವಿರುದ್ಧ ವಿರುದ್ಧ ಪೊಲೀಸರು ಅಶ್ರುವಾಯು ಮತ್ತು ರಬ್ಬರ್‌ ಗುಂಡುಗಳನ್ನು ಸಿಡಿಸಿದ್ದಾರೆ.

ಪೊಲೀಸರು ಕೆಲವೆಡೆ ಗುಂಡುಗಳನ್ನು ಸಹ ಸಿಡಿಸಿದ್ದಾರೆ. ಇದರಿಂದಾಗಿ, ಒಬ್ಬ ಬಾಲಕ ಸಾವಿಗೀಡಾಗಿದ್ದಾನೆ.

ಈಗ ಹಲವು ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರತಿಭಟನೆ ವಿಸ್ತರಿಸಿದೆ. ಮೊನ್ಯಾವಾ ನಗರದಲ್ಲಿ ಬುಧವಾರ ಬೃಹತ್‌ ಪ್ರತಿಭಟನೆ ಆಯೋಜಿಸಲಾಗಿತ್ತು. ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡು ಸಿಡಿಸಿದರು ಎಂದು ವರದಿಯಾಗಿದೆ.

ಮಾಗ್ವೆ ನಗರದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಹಾರಿಸಿದ ಗುಂಡಿಗೆ ವಿದ್ಯಾರ್ಥಿಯೊಬ್ಬ ತೀವ್ರ ಗಾಯಗೊಂಡಿದ್ದಾರೆ.

ಮ್ಯಾನ್ಮಾರ್‌ನಲ್ಲಿನ ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಶುಕ್ರವಾರ ಸಭೆ ನಡೆಸುವ ಸಾಧ್ಯತೆ ಇದೆ. ಆದರೆ, ಯಾವುದೇ ನಿರ್ಧಾರಕ್ಕೂ ರಷ್ಯಾ ಮತ್ತು ಚೀನಾ ವಿಟೊ ಮಾಡುವುದರಿಂದ ಈ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

ಭಾನುವಾರ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಕನಿಷ್ಠ 18 ಮಂದಿ ಸಾವಿಗೀಡಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT