ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರಕ್ಕೆ ಪೊಲೀಸರೇ ನೈತಿಕ ಹೊಣೆ: ಕಾಂಗ್ರೆಸ್‌ ಸಮಿತಿ

Last Updated 8 ಸೆಪ್ಟೆಂಬರ್ 2021, 4:57 IST
ಅಕ್ಷರ ಗಾತ್ರ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಅಧ್ಯಯನ ನಡೆಸಿರುವ ಕಾಂಗ್ರೆಸ್ ಸತ್ಯಶೋಧನಾ ಸಮಿತಿಯು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಸಾಕಷ್ಟು ಪೊಲೀಸ್ ಸಿಬ್ಬಂದಿ ಮತ್ತು ವಾಹನಗಳನ್ನು ನಿಯೋಜಿಸುವಲ್ಲಿ ವಿಫಲವಾಗಿದೆ ಎಂದು ರಾಜ್ಯ ಸರ್ಕಾರವನ್ನು ದೂಷಿಸಿದೆ.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ಸಮಿತಿಯು ಕೆಪಿಸಿಸಿಗೆ ಸಲ್ಲಿಸಿರುವ ತನ್ನ 31 ಪುಟಗಳ ವರದಿಯಲ್ಲಿ, ಸಾಮೂಹಿಕ ಅತ್ಯಾಚಾರ ಪ್ರಕರಣದ ನೈತಿಕ ಹೊಣೆಯನ್ನು ಪೊಲೀಸರು ಹೊತ್ತುಕೊಳ್ಳಬೇಕು ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಪದೇ ಪದೆ ಪೊಲೀಸರ ವರ್ಗಾವಣೆ, ಪೊಲೀಸರು ಮತ್ತು ಇತರ ಇಲಾಖೆಗಳ ನಡುವೆ ಸಮನ್ವಯದ ಕೊರತೆ ಹಾಗೂ ವಿಐಪಿ ಭದ್ರತೆಗಾಗಿ ಪೊಲೀಸ್ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸುವುದು ಕಾನೂನು-ಸುವ್ಯವಸ್ಥೆಯ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ ಎಂದೂ ಅದು ಹೇಳಿದೆ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಶಾಸಕರ ನಡುವೆ ಸಮನ್ವಯತೆ ಇಲ್ಲ ಎಂದು ಸಮಿತಿ ಹೇಳಿದೆ.

ಪೊಲೀಸರ ವಿರುದ್ಧ ಆರೋಪಗಳನ್ನು ಮಾಡಿರುವ ನಾಗರಿಕರು, ಪೊಲೀಸರು ಕಾನೂನು-ಸುವ್ಯವಸ್ಥೆ ಬದಲು ರಿಯಲ್ ಎಸ್ಟೇಟ್ ಮತ್ತು ನಾಗರಿಕ ವಿಷಯಗಳನ್ನು ಪರಿಹರಿಸುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದಿರುವುದಾಗಿ ಸಮಿತಿ ಹೇಳಿದೆ.

ಮುಂದಿನ ಐದು ತಿಂಗಳಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಲು ಮತ್ತು ಪ್ರವಾಸಿಗರನ್ನು ಆಕರ್ಷಿಸುವ ನಗರದಲ್ಲಿ ಪೊಲೀಸ್ ವ್ಯವಸ್ಥೆಯನ್ನು ಬಲವನ್ನು ಬಲಪಡಿಸಲು ಸರ್ಕಾರವನ್ನು ಸಮಿತಿಯು ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT