ಮಂಗಳವಾರ, ಸೆಪ್ಟೆಂಬರ್ 29, 2020
22 °C

3.04 ಕೋಟಿ ಎನ್ 95 ಮಾಸ್ಕ್,1.28 ಕೋಟಿ ಪಿಪಿಇಗಳು ರಾಜ್ಯಗಳಿಗೆ ಪೂರೈಕೆ: ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಒಟ್ಟು 3.04 ಕೋಟಿ ಎನ್ 95 ಮಾಸ್ಕ್, 1.28 ಕೋಟಿ ಪಿಪಿಇಗಳು, 10.83 ಕೋಟಿ ಎಚ್.ಸಿ.ಕ್ಯೂ ಮಾತ್ರೆಗಳನ್ನು ಉಚಿತವಾಗಿ ಮಾರ್ಚ್ 11ರಿಂದ ವಿತರಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಹೆಚ್ಚುವರಿಯಾಗಿ 22,553 ‘ಮೇಕ್ ಇನ್ ಇಂಡಿಯಾ’ ವೆಂಟಿಲೇಟರ್‌ಗಳನ್ನು ವಿವಿಧ ರಾಜ್ಯಗಳಿಗೆ ವಿತರಿಸಲಾಗಿದೆ ಎಂದು ತಿಳಿಸಿದೆ.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್-19 ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯ ಚಿಕಿತ್ಸಾ ಸೌಲಭ್ಯಗಳ ಬಲಪಡಿಸುವ ಕಾರ್ಯದಲ್ಲಿ ಕೇಂದ್ರ ನಿರತವಾಗಿದೆ. ಅಲ್ಲದೆ, ಇವುಗಳ ಪರಿಣಾಮಕಾರಿ ಬಳಕೆಗೆ ಒತ್ತು ನೀಡುತ್ತಿದೆ ಎಂದು ಸಚಿವಾಲಯವು ಹೇಳಿದೆ.

ಕೇಂದ್ರ ಸರ್ಕಾರ ವಿತರಿಸಿರುವ ಬಹುತೇಕ ಉತ್ಪನ್ನಗಳನ್ನು ದೇಶೀಯವಾಗಿಯೇ ಉತ್ಪಾದಿಸಲಾಗಿದೆ. ಜಾಗತಿಕವಾಗಿ ಬೇಡಿಕೆ ಹೆಚ್ಚುತ್ತಿರುವ ಕಾರಣ ವಿದೇಶಿ ಮಾರುಕಟ್ಟೆಗಳಲ್ಲಿಯೂ ಬೇಡಿಕೆ ಹೆಚ್ಚಾಗಿದೆ ಎಂದು ತಿಳಿಸಿದೆ.

ಒಟ್ಟಾರೆ, ‘ಆತ್ಮನಿರ್ಭರ ಭಾರತ’ ಮತ್ತು ‘ಮೇಕ್ ಇನ್ ಇಂಡಿಯಾ’ ಕಲ್ಪನೆಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು