ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್‌ ವಿಧಾನಸಭೆ ಚುನಾವಣೆ: ಬಿಜೆಪಿಯ ಜೆ.ಪಿ ನಡ್ಡಾ ನಾಳೆ ಕೊಹಿಮಾಗೆ ಭೇಟಿ

Last Updated 13 ಫೆಬ್ರುವರಿ 2023, 9:26 IST
ಅಕ್ಷರ ಗಾತ್ರ

ಕೊಹಿಮಾ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮಂಗಳವಾರ ನಾಗಾಲ್ಯಾಂಡ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ನಾಗಾಲ್ಯಾಂಡ್‌ ರಾಜ್ಯದಲ್ಲಿ ಚುನಾವಣೆಯ ಕಾವು ಏರುತ್ತಿದ್ದು, ನಡ್ಡಾ ಅವರು ವಿವಿಧ ಚುನಾವಣೆ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದಾರೆ.

ನಾಳೆ ಇಲ್ಲಿನ ಪಕ್ಷದ ಕಚೇರಿಯಲ್ಲಿ ನಡ್ಡಾ ಅವರು ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡುವರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ನೈಫಿಯು ರಿಯೊ ಕೂಡ ಹಾಜರಿರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ನಾಗಾಲ್ಯಾಂಡ್‌ನಲ್ಲಿ ಆಡಳಿತರೂಢ ಎನ್‌ಡಿಪಿಪಿ ಹಾಗೂ ಬಿಜೆಪಿ ಪಕ್ಷಗಳು ಮೈತ್ರಿಕೊಂಡಿದ್ದು ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿವೆ.

ನಾಗಾಲ್ಯಾಂಡ್‌ನ 60 ವಿಧಾನಸಭೆ ಸ್ಥಾನಗಳ ಪೈಕಿ ಬಿಜೆಪಿ 20 ಸ್ಥಾನಗಳಲ್ಲಿ, ಎನ್‌ಡಿಪಿಪಿ 40 ಸ್ಥಾನಗಳಲ್ಲಿ ಸ್ಪರ್ಧೆ ಮಾಡುತ್ತಿವೆ.

ನಾಗಾಲ್ಯಾಂಡ್ ವಿಧಾನಸಭೆಗೆ ಫೆಬ್ರವರಿ 27 ರಂದು ಮತದಾನ ನಡೆಯಲಿದ್ದು, ಮಾರ್ಚ್ 2ರಂದು ಮತ ಎಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT