ಶನಿವಾರ, ಅಕ್ಟೋಬರ್ 8, 2022
23 °C

ವಿಭಜನೆ ನಿಲ್ಲಿಸಬೇಕು: ಗೋದ್ರೆಜ್‌ ಅಧ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ‘ದೇಶ ವಿಭಜಿಸುವುದನ್ನು ನಾವು ನಿಲ್ಲಿಸಬೇಕಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ ಎಂಬುದನ್ನು ಸರ್ಕಾರವು ಅರ್ಥಮಾಡಿಕೊಳ್ಳಬೇಕಿದೆ’ ಎಂದು ಗೋದ್ರೆಜ್‌ ಇಂಡಸ್ಟ್ರೀಸ್‌ ಅಧ್ಯಕ್ಷ ನಾದಿರ್ ಗೋದ್ರೆಜ್‌ ಹೇಳಿದ್ದಾರೆ.

ಇಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಹೇಳಿದ್ದಾರೆ. ‘ಭಿನ್ನದನಿಗಳನ್ನು ಹತ್ತಿಕ್ಕುವ ಸರ್ಕಾರ ಇಲ್ಲದಿರುವ, ಅಭಿವ್ಯಕ್ತಿ ಸ್ವಾತಂತ್ರ್ಯ ವಿರುವ ಸ್ಥಿತಿಯನ್ನು ನಾನು ನೋಡಲು ಬಯಸುತ್ತೇನೆ’ ಎಂಬ ಕವನದ ಸಾಲುಗಳ ಮೂಲಕ ಅವರು ಮಾತು ಆರಂಭಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.