ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್‌ನಲ್ಲಿ ನಾಗರಿಕರ ಹತ್ಯೆ: ಭದ್ರತಾ ಪಡೆ ವಿರುದ್ಧ ಭಾರೀ ಪ್ರತಿಭಟನೆ

Last Updated 6 ಡಿಸೆಂಬರ್ 2021, 8:42 IST
ಅಕ್ಷರ ಗಾತ್ರ

ಗುವಾಹಟಿ: ಮೊನ್ ಜಿಲ್ಲೆಯಲ್ಲಿ ಭದ್ರತಾ ಪಡೆಯಿಂದ ನಾಗರಿಕರ ಹತ್ಯೆ ಖಂಡಿಸಿಸೋಮವಾರ ನಾಗಾಲ್ಯಾಂಡ್‌ನಲ್ಲಿ ಜನ ಪ್ರತಿಭಟನೆ ನಡೆಸುತ್ತಿದ್ದಾರೆ.ಅಂಗಡಿ–ಮುಂಗಟ್ಟು, ಕಚೇರಿಗಳನ್ನು ಮುಚ್ಚಿ ಬಹುತೇಕ ಕಡೆ ಬಂದ್ ಆಚರಿಸಿದ್ದಾರೆ.

ಇನ್ನೊಂದೆಡೆ ಹತರಾದ 14 ನಾಗರಿಕರ ಸಾಮೂಹಿಕ ಅಂತ್ಯ ಸಂಸ್ಕಾರವನ್ನು ಮೊನ್ ಜಿಲ್ಲೆಯಲ್ಲಿ ನಡೆಸಲಾಗಿದೆ. ಈ ವೇಳೆ ನಾಗಾಲ್ಯಾಂಡ್ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಹಾಜರಿದ್ದರು.

ಘಟನೆಯನ್ನು ತೀವ್ರವಾಗಿ ಖಂಡಿಸಿರುವ ನಾಗಾಲ್ಯಾಂಡ್ ಜನ, ಸೋಮವಾರ ಬೆಳಿಗ್ಗೆಯಿಂದ ಸ್ವಯಂಪ್ರೇರಿತವಾಗಿ ಬಂದ್ ಆಚರಿಸಿ, ಭದ್ರತಾ ಪಡೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸಂಜೆ 6 ಗಂಟೆಯವರೆಗೆ ವಿವಿಧ ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ.

ಇನ್ನೊಂದೆಡೆ ಘಟನೆ ನಡೆದ ಮೊನ್ ಜಿಲ್ಲೆಯಲ್ಲಿ ಕರ್ಫ್ಯೂ ಹೇರಲಾಗಿದ್ದು, ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೇ ನಾಗಾ ಜನರಿರುವ ಪಕ್ಕದ ಅಸ್ಸಾಂ, ಮಣಿಪುರ ಹಾಗೂ ಅರುಣಾಚಲಪ್ರದೇಶದಲ್ಲೂ ಭದ್ರತೆ ಹೆಚ್ಚಿಸಲಾಗಿದೆ.

ಘಟನೆಯಲ್ಲಿ ಮೃತರಾದವರಿಗೆ ನಾಗಾಲ್ಯಾಂಡ್ ಸರ್ಕಾರ ತಲಾ ₹5 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಎನ್‌ಎಸ್‌ಸಿಎನ್‌ ನಿಷೇಧಿತ ಸಂಘಟನೆಯ ಯಾಂಗ್ ಅಂಗ್ ಬಣದ ಉಗ್ರರ ವಿರುದ್ಧದ ಅಸ್ಸಾಂ ರೈಪಲ್ಸ್ ಪಡೆಯ ಕಾರ್ಯಾಚರಣೆಯಲ್ಲಿಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್‌ ಗ್ರಾಮಗಳಲ್ಲಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಕೊಂದಿದ್ದರು. ದಾಳಿಯಲ್ಲಿ 11 ನಾಗರಿಕರು ಗಾಯಗೊಂಡಿದ್ದಾರೆ. ಘಟನೆ ಶನಿವಾರ ಸಂಜೆಯ ಹೊತ್ತು ನಡೆದಿತ್ತು ಎಂದು ಪೊಲೀಸರು ಭಾನುವಾರ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT