ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಾಲ್ಯಾಂಡ್: ಮೃತರ ಕುಟುಂಬದವರಿಗೆ ₹5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

Last Updated 6 ಡಿಸೆಂಬರ್ 2021, 2:25 IST
ಅಕ್ಷರ ಗಾತ್ರ

ಕೋಹಿಮಾ: ನಾಗಾಲ್ಯಾಂಡ್‌ನ ಮೊನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು. ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಭರಿಸಲಾಗುವುದು ಎಂದು ನಾಗಾಲ್ಯಾಂಡ್ ಸರ್ಕಾರ ಘೋಷಿಸಿದೆ.

ನಾಗಾಲ್ಯಾಂಡ್ ಮುಖ್ಯಮಂತ್ರಿ ನೆಫಿಯು ರಿಯೊ ಇಂದು (ಸೋಮವಾರ) ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಘಟನೆ ಕುರಿತು ತನಿಖೆ ನಡೆಸಲು ಐಜಿಪಿ ನೇತೃತ್ವದ ಉನ್ನತ ಮಟ್ಟದ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವುದಾಗಿಯೂ ರಾಜ್ಯ ಸರ್ಕಾರ ಹೇಳಿದೆ.

ನಾಗರಿಕರ ಸಾವಿಗೆ ಕಾರಣವಾದ ಘಟನೆಯನ್ನು ರಾಜ್ಯ ಸರ್ಕಾರವು ಖಂಡಿಸುತ್ತದೆ ಎಂದು ನಾಗಾಲ್ಯಾಂಡ್ ಮುಖ್ಯ ಕಾರ್ಯದರ್ಶಿ ಜೆ.ಅಲಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವ ಪಿ. ಪೈವಾಂಗ್ ನೇತೃತ್ವದಲ್ಲಿ ಡಿಜಿಪಿ ಸೇರಿದಂತೆ ಉನ್ನತ ಅಧಿಕಾರಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ತೆರಳಿದ್ದು, ಪರಿಸ್ಥಿತಿಯನ್ನು ನಿಭಾಯಿಸುತ್ತಿದೆ. ತುರ್ತು ಪರಿಹಾರ ಕಾರ್ಯಾಚರಣೆಗೆ ಸರ್ಕಾರದ ಹೆಲಿಕಾಪ್ಟರ್‌ಗಳನ್ನು ಕಳುಹಿಸಿಕೊಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೊನ್ ಜಿಲ್ಲೆಯ ಟಿರು ಮತ್ತು ಒಟಿಂಗ್‌ ಗ್ರಾಮಗಳಲ್ಲಿ 14 ನಾಗರಿಕರನ್ನು ಭದ್ರತಾ ಪಡೆಗಳ ಸಿಬ್ಬಂದಿ ಗುಂಡಿಟ್ಟು ಕೊಂದಿದ್ದಾರೆ. ದಾಳಿಯಲ್ಲಿ 11 ನಾಗರಿಕರು ಗಾಯಗೊಂಡಿದ್ದಾರೆ. ಘಟನೆ ಶನಿವಾರ ಸಂಜೆಯ ಹೊತ್ತು ನಡೆದಿತ್ತು ಎಂದು ಪೊಲೀಸರು ಭಾನುವಾರ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT