ಶನಿವಾರ, ಜುಲೈ 2, 2022
22 °C

ಕಾಂಗ್ರೆಸ್‌ ಸೇರಿದ ಬಿಎಸ್‌ಪಿ ಮುಖಂಡ ನಕುಲ್‌ ದುಬೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ ತಿಂಗಳು ಬಿಎಸ್‌ಪಿಯಿಂದ ಉಚ್ಚಾಟಿತರಾದ ಉತ್ತರ ಪ್ರದೇಶದ ಪ್ರಮುಖ ಬ್ರಾಹ್ಮಣ ನಾಯಕ ನಕುಲ್‌ ದುಬೆ ಅವರು ಗುರುವಾರ ಕಾಂಗ್ರೆಸ್‌ ಪಕ್ಷ ಸೇರಿದರು.

ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಶುಕ್ಲಾ ಅವರ ಸಮ್ಮುಖದಲ್ಲಿ ಪಕ್ಷ ಸೇರಿದ ದುಬೆ ಅವರು, ‘ಉತ್ತರ ಪ್ರದೇಶದ ಜತೆಗೆ ಇಡೀ ದೇಶದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮತ್ತಷ್ಟು ಶಕ್ತಿಯುತಗೊಳಿಸಲು ಶ್ರಮಿಸುವುದಾಗಿ’ ಹೇಳಿದರು.  

ವೃತ್ತಿಯಲ್ಲಿ ವಕೀಲರಾಗಿರುವ ದುಬೆ ಅವರನ್ನು ಅಶಿಸ್ತು ಮತ್ತು ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಕಾರಣಕ್ಕೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಪಕ್ಷದಿಂದ ಉಚ್ಚಾಟಿಸಿದ್ದರು. ನಕುಲ್ ಅವರು 2007ರ ಬಿಎಸ್‌ಪಿ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು