ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಣಸಿಯ ನಮೋ ಘಾಟ್ ಶೀಘ್ರ ಪ್ರವಾಸಿ ತಾಣ

₹34 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ
Last Updated 27 ಏಪ್ರಿಲ್ 2022, 12:33 IST
ಅಕ್ಷರ ಗಾತ್ರ

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರ ವಾರಾಣಸಿಯಲ್ಲಿರುವ ನಮೋ ಘಾಟ್ ಎಂದೇ ಖ್ಯಾತವಾದ ಖಿಡಕಿಯಾ ಘಾಟ್ ಶೀಘ್ರವೇ ಪ್ರವಾಸಿ ತಾಣವಾಗಿ ಹೊರಹೊಮ್ಮಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೈ ಮುಗಿಯುವಂತಿರುವ 3 ಶಿಲ್ಪಗಳಿರುವ ಈ ಥಾಟ್‌ ಅನ್ನು ₹35 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.ಪ್ರಧಾನಿ ಮೋದಿ ಅವರೇ ಘಾಟ್ ಅನ್ನು ಉದ್ಘಾಟಿಸುವ ನಿರೀಕ್ಷೆಯಿದೆ ಎಂದು ಬುಧವಾರ ಅಧಿಕಾರಿಗಳು ಹೇಳಿದ್ದಾರೆ.

ವಾರಾಣಸಿಯಲ್ಲಿರುವ 85ನೇ ಘಾಟ್ ಇದಾಗಿದ್ದು, 25 ಅಡಿಯ 2 ಶಿಲ್ಪಗಳು ಮತ್ತು 15 ಅಡಿಯ ಶಿಲ್ಪವು ಗಂಗಾ ನದಿಗೆ ನಮಸ್ಕರಿಸುವ ಭಂಗಿಯಲ್ಲಿದೆ. ಮುಂದಿನ ದಿನಗಳಲ್ಲಿ 75 ಅಡಿಯ ಇದೇ ರೀತಿಯ ಶಿಲ್ಪವನ್ನು ಸ್ಥಾಪಿಸುವ ಪ್ರಸ್ತಾವ ಇದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT