ಶುಕ್ರವಾರ, ಏಪ್ರಿಲ್ 23, 2021
28 °C
ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ

ಪಶ್ಚಿಮ ಬಂಗಾಳ ಮತದಾನ: ನಂದಿಗ್ರಾಮದಲ್ಲೇ ಬೀಡುಬಿಟ್ಟ ಮಮತಾ ಬ್ಯಾನರ್ಜಿ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನಂದಿಗ್ರಾಮ: ಪಶ್ಚಿಮ ಬಂಗಾಳದ ಜಿದ್ದಾಜಿದ್ದಿ ಕ್ಷೇತ್ರವೆಂದೇ ಗುರುತಿಸಲಾಗಿರುವ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಮತದಾನ ಆರಂಭವಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತದಾನ ಮುಗಿಯುವವರೆಗೂ ಇಲ್ಲಿನ ರೆಯಾಪುರ ಪ್ರದೇಶದ ಪಕ್ಷದ ಕಾರ್ಯಾಲಯದಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

ತೀವ್ರ ಕುತೂಹಲ ಕೆರಳಿಸುತ್ತಿರುವ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ತಮ್ಮ ಪಕ್ಷದ ಏಜೆಂಟರಿಗೆ ಕೆಲವು ಮತಗಟ್ಟೆಗಳ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂದು ಟಿಎಂಸಿ ಪಕ್ಷದ ಕಾರ್ಯಕರ್ತರು ದೂರಿದರು. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿಯವರು ಕ್ಷೇತ್ರದಲ್ಲಿನ ಮತಗಟ್ಟೆ ಕೇಂದ್ರಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿರುವ ಈ ನಂದಿಗ್ರಾಮ ಕ್ಷೇತ್ರದಲ್ಲಿ ಮತದಾನ ಆರಂಭವಾದ ಎರಡು ಗಂಟೆಗಳಲ್ಲಿ ಶೇ 17ರಷ್ಟು ಮತದಾನವಾಗಿತ್ತು ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದರು.

ನಂದಿಗ್ರಾಮದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭಿಮ್ಕತಾ ಪ್ರದೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಟಿಎಂಸಿ ಕಾರ್ಯಕರ್ತರು ಘೋಷಣೆ ಕೂಗಿರುವ ಪ್ರಕರಣ ಹೊರತುಪಡಿಸಿ, ಕ್ಷೇತ್ರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು