ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಡಿಪಿ ಅಧಿಕಾರಕ್ಕೆ ಬಂದರೆ ಇಸ್ಲಾಮಿಕ್ ಬ್ಯಾಂಕ್ ಸ್ಥಾಪನೆ: ನಾರಾ ಲೋಕೇಶ್

Last Updated 22 ಫೆಬ್ರವರಿ 2023, 8:52 IST
ಅಕ್ಷರ ಗಾತ್ರ

ಅಮರಾವತಿ(ಆಂಧ್ರಪ್ರದೇಶ): ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಆಂಧ್ರ ಪ್ರದೇಶದಲ್ಲಿ ಮುಸ್ಲಿಂ ಸಮುದಾಯಕ್ಕಾಗಿ ಇಸ್ಲಾಮಿಕ್ ಬ್ಯಾಂಕ್ ಸ್ಥಾಪಿಸುವುದಾಗಿ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಭರವಸೆ ನೀಡಿದ್ದಾರೆ.

'ಯುವ ಗಳಂ' ಪಾದಯಾತ್ರೆಯನ್ನು ಪುನರಾರಂಭಿಸಿದ ಲೋಕೇಶ್, ಈ ಹಿಂದಿನ ಮುಖ್ಯಮಂತ್ರಿ ಮತ್ತು ಟಿಡಿಪಿಯ ಸಂಸ್ಥಾಪಕ ಎನ್.ಟಿ. ರಾಮರಾವ್‌ ಅವರು ಅಲ್ಪಸಂಖ್ಯಾತರ ನಿಗಮವನ್ನು ಸ್ಥಾಪಿಸಿದ್ದರು. ಆದರೆ ವೈ.ಎಸ್ ಜಗನ್ ಮೋಹನ್ ರೆಡ್ಡಿ ಸಿಎಂ ಆದ ಬಳಿಕ ನಿಗಮವನ್ನು ಸ್ಥಗಿತಗೊಳಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಟಿಡಿಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮುಸ್ಲಿಂ ಸಮುದಾಯಕ್ಕಾಗಿ ‘ಇಸ್ಲಾಮಿಕ್ ಬ್ಯಾಂಕ್’ ಸ್ಥಾಪಿಸುವುದರ ಮೂಲಕ ಅಲ್ಪಸಂಖ್ಯಾತ ಸಮುದಾಯಕ್ಕೆ ಮತ್ತೆ ಜೀವ ತುಂಬುವುದಾಗಿ ಲೋಕೇಶ್ ಭರವಸೆ ನೀಡಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಜಾರಿಗೆ ತಂದ ಎಲ್ಲಾ ಕಲ್ಯಾಣ ಯೋಜನೆಗಳನ್ನು ರೆಡ್ಡಿ ಅವರು ಸ್ಥಗಿತಗೊಳಿಸಿದ್ದಾರೆ. ರೈತರಿಗೆ ಕ್ರಿಮಿನಾಶಕಗಳ ಬದಲಿಗೆ ಅಗ್ಗದ ಮದ್ಯ ದೊರೆಯುತ್ತಿದೆ ಎಂದು ಲೋಕೇಶ್ ವಾಗ್ದಾಳಿ ನಡೆಸಿದ್ದಾರೆ.

ಲೋಕೇಶ್ ಪಾದಯಾತ್ರೆ ಶ್ರೀ ಕಾಳಹಸ್ತಿ ವಿಧಾನಸಭಾ ಕ್ಷೇತ್ರದ ತೊಂಡಮನುಪುರಂ ಗ್ರಾಮವನ್ನು ತಲುಪಿದೆ. ಈ ವೇಳೆ ರೈತರು ಸೇರಿದಂತೆ ಗಾಂಡ್ಲ, ತೆಲಿಕುಲ, ದೇವ ತೆಲಿಕುಲ ಸಮುದಾಯಗಳಿಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT