ಭಾನುವಾರ, ಜೂನ್ 20, 2021
21 °C

ನಾರದ ಪ್ರಕರಣ: ಜೈಲಲ್ಲಿರುವ ಟಿಎಂಸಿ ಮುಖಂಡರ ಗೃಹಬಂಧನಕ್ಕೆ ಹೈಕೋರ್ಟ್‌ ಆದೇಶ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ನಾರದ ಪ್ರಕರಣದಲ್ಲಿ ಸಿಬಿಐನಿಂದ ಬಂಧಿತರಾಗಿ ಜೈಲಲ್ಲಿರುವ ತೃಣಮೂಲ ಕಾಂಗ್ರೆಸ್‌ನ ನಾಲ್ವರು ನಾಯಕರನ್ನು ಗೃಹಬಂಧನದಲ್ಲಿಡಲು ಕೋಲ್ಕತ್ತ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ.

'ನಾರದ ಪ್ರಕರಣದ ವಿಚಾರಣೆಯು ಉನ್ನತ ಪೀಠದಿಂದ ನಡೆಯಬೇಕಿದೆ. ಆ ಕಾರಣ ಜೈಲಿನಲ್ಲಿರುವ ಟಿಎಂಸಿ ನಾಯಕರನ್ನು ಗೃಹಬಂಧನದಲ್ಲಿ ಇಡಬೇಕು' ಎಂದು ನ್ಯಾಯಾಲಯವು ತಿಳಿಸಿದೆ.

ನಾರದ ಮಾರುವೇಷ ಕಾರ್ಯಾಚರಣೆ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ನ ಮೂವರು ಹಿರಿಯ ನಾಯಕರು ಮತ್ತು ಸಚಿವರನ್ನು ಸಿಬಿಐ ಸೋಮವಾರ ಬೆಳಿಗ್ಗೆ ಬಂಧಿಸಿತ್ತು.

ಸಾರಿಗೆ ಸಚಿವ ಫಿರ್ಹಾದ್‌ ಹಕೀಮ್‌, ಪಂಚಾಯತ್‌ ಸಚಿವ ಸುಬ್ರತಾ ಮುಖರ್ಜಿ, ಶಾಸಕ ಮದನ್‌ ಮಿತ್ರಾ ಮತ್ತು ಟಿಎಂಸಿಯ ಮಾಜಿ ಮುಖಂಡ ಸೋವನ್‌ ಚಟರ್ಜಿ ಅವರನ್ನು ಬಂಧಿಸಿ ಜೈಲಿನಲ್ಲಿ ಇಡಲಾಗಿದೆ.

ಲಂಚ ಹಗರಣ ಸಂಬಂಧಿತ ಪ್ರಕರಣವನ್ನು ಪಶ್ಚಿಮ ಬಂಗಾಳದಿಂದ ವರ್ಗಾಯಿಸುವಂತೆ ಕೋರಿ ಸಿಬಿಐ ಕೋಲ್ಕತ್ತ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮಲಯ್‌ ಘಟಕ್‌ ಅವರ ಹೆಸರನ್ನು ಸಿಬಿಐ ಅರ್ಜಿಯಲ್ಲಿ ಹೆಸರಿಸಿದೆ.

ಈ ಪ್ರಕರಣದಲ್ಲಿ ನಾಲ್ವರು ಮುಖಂಡರಿಗೂ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು. ಆದರೆ, ಕೋಲ್ಕತ್ತ ಹೈಕೋರ್ಟ್‌ ಜಾಮೀನು ಆದೇಶಕ್ಕೆ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವುಗೊಳಿಸುವಂತೆ ಮುಖಂಡರು ಮನವಿ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು