ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾರದಾ ಪ್ರಕರಣ: ಮಮತಾ ಅರ್ಜಿ ಸ್ವೀಕರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Last Updated 25 ಜೂನ್ 2021, 10:44 IST
ಅಕ್ಷರ ಗಾತ್ರ

ನವದೆಹಲಿ: ‘ನಾರದಾ ಸ್ಟಿಂಗ್‌ ಆಪರೇಷನ್‌ ಟೇಪ್‌’ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ರಾಜ್ಯ ಕಾನೂನು ಸಚಿವ ಮಲಯ್‌ ಘಟಕ್‌ ಅವರು ಸಲ್ಲಿಸಿದ್ದ ಅಫಿಡವಿಟ್‌ ಅನ್ನು ತೆಗೆದುಕೊಳ್ಳಲು ನಿರಾಕರಿಸಿ ಜೂನ್‌ 9ರಂದು ಕಲ್ಕತ್ತ ಹೈಕೋರ್ಟ್‌ ಹೊರಡಿಸಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಶುಕ್ರವಾರ ರದ್ದುಗೊಳಿಸಿದೆ.

ಸಿಬಿಐನ ವರ್ಗಾವಣೆ ಅರ್ಜಿ ನಿರ್ಧರಿಸುವ ಮೊದಲು ಬ್ಯಾನರ್ಜಿ, ಘಟಕ್‌ ಮತ್ತು ರಾಜ್ಯ ಸರ್ಕಾರದ ಮನವಿಯನ್ನು ಹೊಸದಾಗಿ ತೀರ್ಮಾನಿಸಬೇಕು ಎಂದು ನ್ಯಾಯಮೂರ್ತಿಗಳಾದ ವಿನೀತ್‌ ಸರನ್‌ ಮತ್ತು ದಿನೇಶ್‌ ಮಹೇಶ್ವರಿ ಅವರ ರಜಾಕಾಲದ ಪೀಠವು, ಹೈಕೋರ್ಟ್‌ ಪ್ರಭಾರಿ ಮುಖ್ಯ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ನೇತೃತ್ವದ ಐವರು ನ್ಯಾಯಾಧೀಶರ ಪೀಠಕ್ಕೆ ಸೂಚಿಸಿತು.

ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಟಿಎಂಸಿ ಮುಖಂಡರನ್ನು ಮೇ 17ರಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದರು. ಈ ಮುಖಂಡರನ್ನು ಬಂಧಿಸಿದ ನಂತರ, ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಿಬಿಐಗೆ ಟಿಎಂಸಿ ಮುಖಂಡರು ಅಡ್ಡಿಪಡಿಸಿದ್ದರು ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT