ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೀಘ್ರದಲ್ಲೇ 'ಜನಾಶೀರ್ವಾದ ಯಾತ್ರೆ' ಪುನರಾರಂಭಿಸಲಿರುವ ನಾರಾಯಣ ರಾಣೆ

Last Updated 25 ಆಗಸ್ಟ್ 2021, 15:26 IST
ಅಕ್ಷರ ಗಾತ್ರ

ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಶೀಘ್ರದಲ್ಲೇ 'ಜನಾಶೀರ್ವಾದ ಯಾತ್ರೆ' ಪುನರಾರಂಭಿಸಲಿದ್ದಾರೆ ಎಂದು ನಿಕಟ ಮೂಲಗಳು ತಿಳಿಸಿವೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ನೀಡಿದ್ದ ಬಿಜೆಪಿ ಮುಖಂಡ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಿ ಬಳಿಕ ತಡರಾತ್ರಿ ಜಾಮೀನು ನೀಡಲಾಗಿತ್ತು.

ನಾರಾಯಣ ರಾಣೆ ಪ್ರಯಾಣದ ಮಾರ್ಗದಲ್ಲಿ ಯಾವುದೇ ಬದಲಾವಣೆಯಿಲ್ಲ. ಅಲ್ಲದೆ ಜನಾಶೀರ್ವಾದ ಯಾತ್ರೆ ಪುನರಾರಂಭಿಸುವ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನಿಕಟವರ್ತಿ ರಜನ್ ತೇಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾರಾಯಣ ರಾಣೆ ಅವರು ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂಬು ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿಳಿಸಿದ್ದಾರೆ.

ಇತ್ತೀಚಿಗೆ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿರುವ ಬಿಜೆಪಿ ನಾಯಕ ರಾಣೆ, ಆಗಸ್ಟ್ 19ರಂದು ಮುಂಬೈಯಿಂದ ಜನಾಶೀರ್ವಾದ ಯಾತ್ರೆ ಆರಂಭಿಸಿದ್ದರು. ಏಳು ದಿನಗಳ ಯಾತ್ರೆ ಸಿಂಧುದುರ್ಗದಲ್ಲಿ ಮುಕ್ತಾಯಗೊಳ್ಳಬೇಕಿತ್ತು.

ರಾಯಗಡದಲ್ಲಿ ಯಾತ್ರೆಯ ವೇಳೆ ಮುಖ್ಯಮಂತ್ರಿ ‘ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕೆನ್ನೆಗೆ ಬಾರಿಸುತ್ತೇನೆ’ ಎಂದು ಹೇಳಿರುವುದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸ್ ಪ್ರಕರಣ ದಾಖಲಿಸಿತ್ತು.

ಇದು ಕೇಂದ್ರ ಹಾಗೂ ಮಹಾರಾಷ್ಟ್ರ ಸರ್ಕಾರದ ನಡುವಣ ನೇರ ರಾಜಕೀಯ ಹಣಾಹಣಿಗೆ ಕಾರಣವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT