ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಮಾದಕ ವಸ್ತುಗಳ ಕಳ್ಳಸಾಗಣೆದಾರನೊಬ್ಬನನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಬುಧವಾರ ಗುಂಡಿಕ್ಕಿ ಕೊಂದಿದೆ.
ಆತನ ಬಳಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಸುಮಾರು 27 ಕೆ.ಜಿ ಹೆರಾಯಿನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದರು.
‘ಹಿರಾನಗರ ಸೆಕ್ಟರ್‌ನ ಪನ್ಸಾರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭದ್ರತಾ ಸಿಬ್ಬಂದಿ ಎಚ್ಚರಿಕೆ ನೀಡಿದರೂ, ಅದನ್ನು ಕಡೆಗಣಿಸಿ ಕಳ್ಳಸಾಗಣೆದಾರನೊಬ್ಬ ಭಾರತದ ಭೂಪ್ರದೇಶ ಪ್ರವೇಶಿಸಿದ್ದನು. ಬಳಿಕ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಭದ್ರತಾ ಸಿಬ್ಬಂದಿಯು ಆತನ ಮೇಲೆ ಗುಂಡು ಹಾರಿಸಿದರು’ ಎಂದು ಬಿಎಸ್‌ಎಫ್ ವಕ್ತಾರರು ಮಾಹಿತಿ ನೀಡಿದರು.
‘ಈ ಕಾರ್ಯಾಚರಣೆ ವೇಳೆ ವಶಕ್ಕೆ ಪಡೆದ ಡ್ರಗ್ಸ್‌ಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ₹100 ಕೋಟಿ ಬೆಲೆಯಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.