ಭಾನುವಾರ, ಮೇ 22, 2022
27 °C

ನರೇಂದ್ರ ಗಿರಿ ಸಾವು ಪ್ರಕರಣ: ಮೂವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಖಿಲ ಭಾರತೀಯ ಅಖಾಡ ಪರಿಷತ್‌ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಶಿಷ್ಯ ಆನಂದ ಗಿರಿ ಮತ್ತು ಇತರ ಇಬ್ಬರ ವಿರುದ್ಧ ಸಿಬಿಐ ಶನಿವಾರ ಚಾರ್ಜ್‌ಶೀಟ್‌ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಅಲಹಾಬಾದ್‌ನ ನ್ಯಾಯಾಲಯಕ್ಕೆ ಸಿಬಿಐ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ, ಗಿರಿ, ಅಲಹಾಬಾದ್‌ನ ಹನುಮಾನ್ ದೇವಸ್ಥಾನದ ಅರ್ಚಕ ಆದ್ಯ ತಿವಾರಿ ಮತ್ತು ಅವರ ಮಗ ಸಂದೀಪ್ ತಿವಾರಿ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಆತ್ಮಹತ್ಯೆಗೆ ಪ್ರಚೋದನೆಯ ಆರೋಪವನ್ನು ಹೊರಿಸಿದೆ ಎಂದು ಅವರು ಹೇಳಿದರು.

ಭಾರತದ ಅತಿದೊಡ್ಡ ಸಾಧುಗಳ ಸಂಘಟನೆಯ ಅಧ್ಯಕ್ಷರಾಗಿದ್ದ ನರೇಂದ್ರ ಗಿರಿ ಅವರ ಮೃತದೇಹವು ಇದೇ ಸೆಪ್ಟೆಂಬರ್ 20 ರಂದು ಅಲಹಾಬಾದ್‌ನ ಬಾಘಂಬರಿ ಮಠದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು