ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುತ್ತಿರುವ ಕೋವಿಡ್‌ ಪ್ರಕರಣ: ನಾಳೆ ಮುಖ್ಯಮಂತ್ರಿಗಳ ತುರ್ತು ಸಭೆ ಕರೆದ ಮೋದಿ

Last Updated 16 ಮಾರ್ಚ್ 2021, 1:23 IST
ಅಕ್ಷರ ಗಾತ್ರ

ನವದೆಹಲಿ: ಕೆಲವು ರಾಜ್ಯಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಬುಧವಾರ ಸಭೆ ನಡೆಸಲಿದ್ದಾರೆ.

ಮಾರ್ಚ್‌ 17ರಂದು ನಡೆಯಲಿರುವ ಸಭೆಯಲ್ಲಿ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ರಾಜ್ಯಗಳಲ್ಲಿ ಕೈಗೊಂಡ ಕ್ರಮಗಳು, ಇನ್ನು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತದೆ.

ಬುಧವಾರ ಮಧ್ಯಾಹ್ನ 12:30ಕ್ಕೆ ವರ್ಚುವಲ್‌ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಭಾರತದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಬರುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಕೋವಿಡ್‌ ಪ್ರಕರಣಗಳ ಕೇಂದ್ರಬಿಂದುವೆಂದೇ ಪರಿಗಣಿಸಲ್ಪಟ್ಟಿರುವ ಮಹಾರಾಷ್ಟ್ರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಅಧಿಕವಾಗಿದೆ.

ಅತಿ ಹೆಚ್ಚು ಕೋವಿಡ್‌ ಪ್ರಕರಣಗಳು ಇರುವ ಹತ್ತು ಜಿಲ್ಲೆಗಳಲ್ಲಿ ಬೆಂಗಳೂರು ನಗರ ಮತ್ತು ಕೇರಳದ ಎರ್ನಾಕುಲಂ ಸೇರಿವೆ. ಉಳಿದ ಎಂಟು ಜಿಲ್ಲೆಗಳು ಮಹಾರಾಷ್ಟ್ರದ್ದಾಗಿವೆ. ಕೋವಿಡ್‌ ಸಾಂಕ್ರಾಮಿಕವನ್ನು ತಡೆಯುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿಗೊಳಿಸಲಾಗಿದೆ.

ದೇಶದಲ್ಲಿ ಈವರೆಗೆ ಒಟ್ಟು 1,13,85,339 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,58,725 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT