ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಕೋಸಿ ರೈಲು ಮಹಾ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Last Updated 18 ಸೆಪ್ಟೆಂಬರ್ 2020, 9:51 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರುಐತಿಹಾಸಿಕ ಕೋಸಿ ರೈಲು ಮಹಾ ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದಾರೆ. ಇದರ ಜತೆಗೆಬಿಹಾರದಲ್ಲಿ ನೂತನ ರೈಲು ಮಾರ್ಗ ಯೋಜನೆ, ವಿದ್ಯುದ್ದೀಕರಣ ಯೋಜನೆಗಳಿಗೂ ಶುಕ್ರವಾರ ಚಾಲನೆ ನೀಡಿದ್ದಾರೆ.

ವಿಡಿಯೊ ಕಾನ್ಫರೆನ್ಸ್ ಮೂಲಕ ಯೋಜನೆಗಳಿಗೆ ಚಾಲನೆ ನೀಡಿದ ಅವರುಈ ಯೋಜನೆಗಳು ಬಿಹಾರದಲ್ಲಿನ ರೈಲ್ವೆ ಸಂಪರ್ಕ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವುದರ ಜತೆಗೆ ಪಶ್ಚಿಮ ಬಂಗಾಳ ಮತ್ತು ಪಶ್ಚಿಮ ಭಾರತಕ್ಕೆ ಸಂಪರ್ಕವೇರ್ಪಡುವಂತೆ ಮಾಡುತ್ತದೆ ಎಂದಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಅಧಿಕಾರದಲ್ಲಿದ್ದಾಗ 2004ರಲ್ಲಿ ಕೋಸಿ ರೈಲು ಮಹಾಸೇತುವೆಗೆ ಶಂಕು ಸ್ಥಾಪನೆ ಮಾಡಲಾಗಿತ್ತು. 2004ರ ನಂತರದ ಸರ್ಕಾರ ಮಾಡಿದ ರೀತಿಯಲ್ಲಿಯೇ ಈ ಕೆಲಸ ಮಾಡಿದ್ದರೆ ಈ ಯೋಜನೆ ನಿಗದಿತ ಕಾಲದಲ್ಲಿ ಪೂರ್ಣಗೊಳ್ಳುತ್ತಿರಲಿಲ್ಲ. ಕಳೆದ 6 ವರ್ಷಗಳಲ್ಲಿ ನವ ಭಾರತದ ಕನಸು ಮತ್ತು ಆತ್ಮನಿರ್ಭರ್ ಭಾರತದ ನಿರೀಕ್ಷೆಯಲ್ಲಿ ಭಾರತೀಯ ರೈಲ್ವೆ ಇಲಾಖೆಯ ಅಭಿವೃದ್ಧಿ ಕಾರ್ಯಗಳು ನಡೆದಿವೆ.ಮೇಡ್ ಇನ್ ಇಂಡಿಯಾ ರೈಲುಗಳು ರೈಲು ಸಂಪರ್ಕ ವ್ಯವಸ್ಥೆಯ ಭಾಗವಾಗಿವೆ ಎಂದು ಮೋದಿ ಹೇಳಿದ್ದಾರೆ.

ಕೋಸಿ ರೈಲು ಮಹಾ ಸೇತುವೆಯು ಕೇವಲ ಎರಡು ಸ್ಥಳಗಳ ನಡುವೆ ಸಂಪರ್ಕ ಕಲ್ಪಿಸುವುದಲ್ಲದೆ ಬಿಹಾರದ ಆರ್ಥಿಕ ಬೆಳವಣಿಗೆಗೂ ಸಹಾಯ ಮಾಡಲಿದೆ. ಇದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಕಾರಣವಾಗಲಿದೆ ಎಂದು ರೈಲ್ವೆ ಸಚಿವ ಪೀಯುಷ್ ಗೋಯಲ್ ಹೇಳಿದ್ದಾರೆ.

ಬಿಹಾರದ ಅಭಿವೃದ್ಧಿಗಾಗಿ ಕಾರ್ಯವೆಸಗಿದ ರೈಲ್ವೆ ಸಚಿವ ಮತ್ತು ಪ್ರಧಾನಿಯವರಿಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಧನ್ಯವಾದಗಳನ್ನರ್ಪಿಸಿದ್ದಾರೆ.

ಈ ರೈಲು ಮಾರ್ಗವು ಜೈನ ಮತ್ತು ಬೌದ್ಧ ಪುಣ್ಯಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವುದರೊಂದಿಗೆ ಬಿಹಾರದಲ್ಲಿ ಪ್ರವಾಸೋದ್ಯೋಮಕ್ಕೆ ಉತ್ತೇಜನ ನೀಡಲಿದೆ ಎಂದು ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಹೇಳಿದ್ದಾರೆ.

ಈ ಸೇತುವೆಯು 1.0 ಕಿಮೀ ಉದ್ದವಿದ್ದು 516 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ,. 2003-04ರಲ್ಲಿ ಈ ಸೇತುವೆ ನಿರ್ಮಾಣ ಯೋಜನೆಗೆ ಚಾಲನೆ ನೀಡಲಾಗಿತ್ತು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT