ಶನಿವಾರ, ಜನವರಿ 22, 2022
16 °C

ಭಾರತೀಯ ನೌಕಾಪಡೆ ದಿನಾಚರಣೆ: ಶುಭಾಶಯ ಕೋರಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ನೌಕಾಪಡೆ ದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ಅವರು ನೌಕಾಪಡೆ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ.  

ಈ ಕುರಿತು ವಿಡಿಯೊ ಟ್ವೀಟ್‌ ಮಾಡಿರುವ ಅವರು, ‘ಭಾರತೀಯ ನೌಕಾಪಡೆಯ ಅನುಕರಣೀಯ ಕೊಡುಗೆಗಳ ಬಗ್ಗೆ ನಾವು ಹೆಮ್ಮೆಪಡುತ್ತೇವೆ. ನೈಸರ್ಗಿಕ ವಿಕೋಪಗಳಂತಹ ಬಿಕ್ಕಟ್ಟಿನ ಸಂದರ್ಭಗಳನ್ನು ಎದುರಿಸುವಲ್ಲಿ ನಮ್ಮ ನೌಕಾಪಡೆಯ ಸಿಬ್ಬಂದಿ ಯಾವಾಗಲೂ ಮುಂಚೂಣಿಯಲ್ಲಿದ್ದಾರೆ‘ ಎಂದು ತಿಳಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ 1971ರಲ್ಲಿ ನಡೆದ ಯುದ್ಧದಲ್ಲಿ ಕರಾಚಿಯ ನೌಕಾನೆಲೆಯ ಮೇಲೆ ಭಾರತೀಯ ನೌಕಾಪಡೆಯ ಕ್ಷಿಪಣಿ ವಾಹಕ ನೌಕೆಗಳು ದಾಳಿ ಮಾಡಿದ್ದವು. ಇದರಿಂದ ಪಾಕಿಸ್ತಾನವು ಸೋಲು ಕಂಡಿತ್ತು. ಇದರ ನೆನಪಿಗಾಗಿ ಪ್ರತಿ ವರ್ಷ ಡಿ.4ರಂದು ‘ನೌಕಾಪಡೆ ದಿನಾಚರಣೆ’ ಹಮ್ಮಿಕೊಳ್ಳಲಾಗುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು