ಮಂಗಳವಾರ, ಅಕ್ಟೋಬರ್ 20, 2020
25 °C
ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಆರೋಪ

ಮೋದಿ ಸರ್ಕಾರ ನೆರೆ ರಾಷ್ಟ್ರಗಳೊಂದಿಗಿನ ಸಂಬಂಧ ನಾಶಪಡಿಸಿದೆ: ರಾಹುಲ್ ‌ಗಾಂಧಿ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಹಲವು ದಶಕಗಳಿಂದ ಕಾಂಗ್ರೆಸ್‌ ಪಕ್ಷ ಭಾರತದೊಂದಿಗೆ ಬೆಸೆದಿದ್ದ ನೆರೆ– ಹೊರೆಯ ರಾಷ್ಟ್ರಗಳ ಬಾಂಧವ್ಯ ಹಾಗೂ ಸಂಬಂಧಗಳ ಜಾಲವನ್ನು ಪ್ರಧಾನಿ ನರೇಂದ್ರ ಮೋದಿ ನಾಶಪಡಿಸಿದ್ದಾರೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್‌ನಲ್ಲಿ ಹರಿಹಾಯ್ದಿರುವ ಅವರು, ‘ಬಾಂಗ್ಲಾದೇಶದೊಂದಿಗಿನ ಭಾರತದ ಸಂಬಂಧ ದುರ್ಬಲಗೊಳ್ಳುತ್ತಿದ್ದು, ಚೀನಾದೊಂದಿಗಿನ ಒಪ್ಪಂದಗಳು ಬಲಗೊಳ್ಳುತ್ತಿವೆ’ ಎಂಬ ‘ದಿ ಎಕನಾಮಿಸ್ಟ್‌‘ ಪತ್ರಿಕೆಯ ಸುದ್ದಿಯ ತುಣಕನ್ನು ಟ್ಯಾಗ್ ಮಾಡಿ, ‘ನೆರೆ–ಹೊರೆಯಲ್ಲಿ ಸ್ನೇಹಿತರಿಲ್ಲದೇ ಜೀವಿಸುವುದು ತುಂಬಾ ಅಪಾಯ’ ಎಂದು ಉಲ್ಲೇಖಿಸಿದ್ದಾರೆ.  

‘ನೆರೆಯ ರಾಷ್ಟ್ರಗಳೊಂದಿಗಿನ ಭಾರತದ ಬಾಂಧವ್ಯ ತುಂಬಾ ದುರ್ಬಲವಾಗಿದೆ’ ಎಂದು ಮೋದಿ ಸರ್ಕಾರದ ವಿದೇಶಾಂಗ ನೀತಿಯನ್ನು ಕಾಂಗ್ರೆಸ್ ಟೀಕಿಸಿದೆ. ಈ  ಆರೋಪವನ್ನು ನಿರಾಕರಿಸಿರುವ ಕೇಂದ್ರ ಸರ್ಕಾರ, ಭಾರತ ಹಲವು ರಾಷ್ಟ್ರಗಳೊಂದಿಗೆ ಒಪ್ಪಂದಗಳ ಜತೆಗೆ ಗಾಢವಾದ ಸಂಬಂಧವನ್ನು ಹೊಂದಿದೆ. ಇದು ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನ ಬಲಗೊಳ್ಳಲು ಕಾರಣವಾಗಿದೆ ಎಂದು ಪ್ರತಿಕ್ರಿಯಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು