ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಸರ್ಕಾರದ ಕೋವಿಡ್ ಲಸಿಕೆ ನೀತಿ ಅಪಾಯಕಾರಿ: ಕಾಂಗ್ರೆಸ್

Last Updated 5 ಜೂನ್ 2021, 6:50 IST
ಅಕ್ಷರ ಗಾತ್ರ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಲಸಿಕೆ ನೀತಿ ಅಪಾಯಕಾರಿಯಾಗಿದ್ದು ಅನೇಕ ತಪ್ಪುಗಳಿಂದ ಕೂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಾರ್ವತ್ರಿಕವಾಗಿ ಉಚಿತ ಲಸಿಕೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕಾಂಗ್ರೆಸ್‌ ನಾಯಕರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಪತ್ರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಲಾಗಿದ್ದು, ಲಸಿಕೆ ನೀಡಿಕೆಯೊಂದೇ ಕೊರೊನಾ ಸೋಲಿಸಲು ಇರುವ ದಾರಿ ಎಂದು ಉಲ್ಲೇಖಿಸಲಾಗಿದೆ.

ವಿವಿಧ ರಾಜ್ಯಗಳ ಜಿಲ್ಲಾ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿಗಳು ಆಯಾ ಜಿಲ್ಲಾಧಿಕಾರಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿವೆ.

ಕೇಂದ್ರ ಸರ್ಕಾರವು ಲಸಿಕೆ ಖರೀದಿಸಿ ರಾಜ್ಯಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೂ ಉಚಿತವಾಗಿ ಪೂರೈಕೆ ಮಾಡಬೇಕು. ಇದರಿಂದ ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ಜನರಿಗೆ ಲಸಿಕೆ ನೀಡುವುದು ಸುಲಭವಾಗಲಿದೆ ಎಂದು ಕಾಂಗ್ರೆಸ್ ಹೇಳಿದೆ.

ದೇಶದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 2021 ಡಿಸೆಂಬರ್ 31ರ ಒಳಗೆ ಲಸಿಕೆ ನೀಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

‘ಬಡ ಜನರನ್ನು ರಕ್ಷಿಸಲು ಇದೊಂದೇ ದಾರಿ ಇದೆ. ಇದಕ್ಕಾಗಿ ದಿನವೊಂದರಲ್ಲಿ ಒಂದು ಕೋಟಿ ಜನರಿಗೆ ಲಸಿಕೆ ನೀಡುವಂತಾಗಬೇಕು. ಈಗ ದಿನವೊಂದರಲ್ಲಿ ಸರಾಸರಿ 16 ಲಕ್ಷ ಜನರಿಗೆ ಲಸಿಕೆ ನೀಡಲಾಗುತ್ತಿದೆ’ ಎಂದು ಕಾಂಗ್ರೆಸ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT