ಮಂಗಳವಾರ, ಜನವರಿ 19, 2021
24 °C
ಸಮರ್ಥ ನಾಯಕತ್ವಕ್ಕೆ ಸಾಕ್ಷಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ

ವಿಶ್ವದ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೋದಿ ಮುಂದು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ವಿಶ್ವದ ನಾಯಕರ ಜನಪ್ರಿಯತೆಗೆ ಸಂಬಂಧಿಸಿದಂತೆ ಅಮೆರಿಕದ ಕಂಪನಿಯೊಂದು ನಡೆಸಿದ ಸಮೀಕ್ಷೆಯಲ್ಲಿ ಜಾಗತಿಕ ಮಟ್ಟದ ಇತರೆ ನಾಯಕರಿಗಿಂತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತಮ ರೇಟಿಂಗ್ ಬಂದಿದೆ. ಇದು ಮೋದಿ ಅವರ ಸಮರ್ಥ ನಾಯಕತ್ವಕ್ಕೆ ಸಾಕ್ಷಿಯಾಗಿದೆ‘ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಅಮೆರಿಕದ ಕಂಪನಿ ಮಾರ್ನಿಂಗ್ ಕನ್ಸಲ್ಟ್‌, ವಿಶ್ವದ ನಾಯಕರ ಕುರಿತು ನಿರಂತರವಾಗಿ ಸಮೀಕ್ಷೆ ನಡೆಸುತ್ತಿರುತ್ತದೆ. ಈ ಬಾರಿಯ ಸಮೀಕ್ಷೆಯಲ್ಲಿ ಶೇ 75ರಷ್ಟು ಮಂದಿ ಮೋದಿ ಅವರ ಕಾರ್ಯನಿರ್ವಹಣೆ ಮತ್ತು ನಾಯಕತ್ವದ ಬಗ್ಗೆ ಒಲವು ತೋರಿದ್ದಾರೆ. ಶೇ 25ರಷ್ಟು ಮಂದಿ ಅವರ ನಾಯಕತ್ವವನ್ನು ಇಷ್ಟಪಟ್ಟಿಲ್ಲ. ಇದು ವಿಶ್ವದ ಬೇರೆ ಬೇರೆ ದೇಶದ ನಾಯಕರಿಗೆ ದೊರೆತಿರುವ ರೇಟಿಂಗ್‌ಗಿಂತ ಹೆಚ್ಚಿದೆ ಎಂದು ಸಮೀಕ್ಷೆ ತಿಳಿಸಿದೆ. 

ಬೇರೆ ದೇಶಗಳಿಗೆ ಹೋಲಿಸಿದರೆ ಕೊರೋನಾ ಬಿಕ್ಕಟ್ಟನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿರುವುದು ಸೇರಿದಂತೆ ಹಲವು ವಿಷಯಗಳಲ್ಲಿ ಅವರು ವಿಶ್ವದ ಜನಪ್ರಿಯ ನಾಯಕರಾಗಿ ಹೊರ ಹೊಮ್ಮಿದ್ದಾರೆ‘ ಎಂದು ನಡ್ಡಾ ಸಮೀಕ್ಷೆಯ ರೇಟಿಂಗ್ ಉಲ್ಲೇಖಿಸಿ ಟ್ವೀಟ್ ಮಾಡಿದ್ದಾರೆ.

‘ಪ್ರಧಾನಿ ಮೋದಿ ಅವರು ದೇಶದ ಎಲ್ಲಾ ಕ್ಷೇತ್ರಗಳಲ್ಲೂ ಜನಪ್ರಿಯ ವ್ಯಕ್ತಿಯಾಗಿದ್ದಾರೆ. ಅವರಲ್ಲಿರುವ ಸಮರ್ಪಣಾ ಮನೋಭಾವದಿಂದಾಗಿ ಅವರು ಈ ಗೌರವಕ್ಕೆ ಪಾತ್ರರಾಗಿದ್ದು, ವಿಶ್ವ ಮಟ್ಟದಲ್ಲೂ ಅವರು ಮುಂಚೂಣಿಯ ನಾಯಕರಾಗಿದ್ದಾರೆ‘ ಎಂದು ಹೇಳಿದರು.

‘ಈ ಸಮೀಕ್ಷೆಯಲ್ಲಿನ ರೇಟಿಂಗ್ ಅವರ ಸಮರ್ಥ ನಾಯಕತ್ವ ಮತ್ತು ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ. ಇದು ಎಲ್ಲಾ ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ‘ ಎಂದು ನಡ್ಡಾ ಹೇಳಿದರು.

ಮಾರ್ನಿಂಗ್ ಕನ್ಸಲ್ಟ್‌ನ ಸಮೀಕ್ಷೆಯ ಪ್ರಕಾರ, ಜರ್ಮನಿಯ ಚಾನ್ಸೆಲರ್ ಏಂಜೆಲಾ ಮರ್ಕೆಲ್ ಅವರ ಜನಪ್ರಿಯತೆಯ ರೇಟಿಂಗ್ ಶೇಕಡಾ 24 ರಷ್ಟಿದ್ದರೆ, ಬ್ರಿಟನ್‌ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಇದು ನಕಾರಾತ್ಮಕವಾಗಿದೆ. ಏಕೆಂದರೆ ಅವರ ಕೆಲಸವನ್ನು ಒಪ್ಪುವವರಿಗಿಂತ, ವಿರೋಧಿಸುವವರು, ನಿರಾಕರಿಸುವವರ ಸಂಖ್ಯೆಯೇ ಹೆಚ್ಚಾಗಿದೆ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು