ಬುಧವಾರ, ಜೂನ್ 29, 2022
24 °C

ಜಿ-20 ರಾಷ್ಟ್ರಗಳ ಪೈಕಿ ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಜಿ-20 ರಾಷ್ಟ್ರಗಳ ಪೈಕಿ ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಅಭಿಪ್ರಾಯಪಟ್ಟಿದ್ದಾರೆ.

ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್‌ಬಿ) 20ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕಳೆದ ವರ್ಷ ದೇಶವು ದಾಖಲೆ ಪ್ರಮಾಣದ ವಿದೇಶಿ ನೇರ ಹೂಡಿಕೆಯನ್ನು ಆಕರ್ಷಿಸಿದೆ’ ಎಂದು ಹೇಳಿದರು.

ಇದರ ಜೊತೆಗೆ ಸ್ಟಾರ್ಟ್-ಅಪ್ ಸೇರಿದಂತೆ ಹಲವಾರು ಸಾಧನೆಗಳಲ್ಲಿ ದೇಶವು ಹೆಮ್ಮೆಪಡುವಂತಹ ಕೆಲಸ ಮಾಡಿದೆ ಎಂದು ತಿಳಿಸಿದರು.

‘ಜಿ-20 ರಾಷ್ಟ್ರಗಳ ಪೈಕಿ ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. ಇಂಟರ್ನೆಟ್ ಬಳಕೆದಾರರ ಸಂಖ್ಯೆಯಲ್ಲಿ ಭಾರತವು ಎರಡನೇ ಸ್ಥಾನದಲ್ಲಿದೆ. ಜಾಗತಿಕ ಚಿಲ್ಲರೆ ಸೂಚ್ಯಂಕದಲ್ಲಿಯೂ ಎರಡನೇ ಸ್ಥಾನದಲ್ಲಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಸ್ಟಾರ್ಟ್-ಅಪ್ ಪರಿಸರವನ್ನು ಹೊಂದಿದೆ. ಇಂತಹ ಹಲವಾರು ಸಾಧನೆಗಳನ್ನು ಭಾರತ ತನ್ನದಾಗಿಸಿಕೊಂಡಿದೆ’ ಎಂದು ಮೋದಿ ಹೇಳಿದರು.

‘ಸುಧಾರಣೆ, ಸಾಧನೆ, ಪರಿವರ್ತನೆ’ ಎಂಬ ಮಂತ್ರವು ದೇಶದ ಆಡಳಿತವನ್ನು ಮರು ವ್ಯಾಖ್ಯಾನಿಸಿದೆ ಎಂದೂ ಅವರು ಅಭಿಪ್ರಾಯಪಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು