ಪ್ರಧಾನಿ ಮೋದಿ ಭೇಟಿ ಮಾಡಿದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್

ನವದೆಹಲಿ: 'ಮಹಾ ವಿಕಾಸ್ ಅಘಾಡಿ' ನಾಯಕರ ಭ್ರಷ್ಟಾಚಾರ ಪ್ರಕರಣಗಳ ತನಿಖೆಯನ್ನು ಕೇಂದ್ರದ ತನಿಖಾ ಸಂಸ್ಥೆಗಳು ತೀವ್ರಗೊಳಿಸಿವೆ. ಈ ಹಿನ್ನೆಲೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನಿ ಮೋದಿಯನ್ನು ಬುಧವಾರ ಭೇಟಿ ಮಾಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.
ಸಂಸತ್ ಭವನದ ಪ್ರಧಾನ ಮಂತ್ರಿ ಕಚೇರಿಯಲ್ಲಿ ಮೋದಿಯವರನ್ನು ಭೇಟಿಯಾದ ಪವಾರ್ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಶಿವಸೇನಾ ನಾಯಕ ಸಂಜಯ್ ರಾವುತ್ ಹಾಗೂ ಅವರ ಕುಟುಂಬಕ್ಕೆ ಸಂಬಂಧಿಸಿದ ಕೆಲ ಆಸ್ತಿಗಳನ್ನು ಜಾರಿ ನಿರ್ದೇಶನಾಲಯವು ಮಂಗಳವಾರ ‘ಅಕ್ರಮ ಹಣ ವರ್ಗಾವಣೆ ತಡೆ’ ಕಾನೂನಿನ ಅಡಿಯಲ್ಲಿ ಜಪ್ತಿ ಮಾಡಿದೆ.
ಇದನ್ನೂ ಓದಿ– ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರದ ಮಾಜಿ ಸಚಿವ ಅನಿಲ್ ದೇಶಮುಖ್ ಬಂಧಿಸಿದ ಸಿಬಿಐ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.