ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿತೀಶ್‌ ಮೇಲೆ ಮೋದಿ ಶ್ಲಾಘನೆ ಸುರಿಮಳೆ

ಮೂರು ಪೆಟ್ರೋಲಿಯಂ ಯೋಜನೆಗಳಿಗೆ ಪ್ರಧಾನಿ ಚಾಲನೆ
Last Updated 13 ಸೆಪ್ಟೆಂಬರ್ 2020, 19:16 IST
ಅಕ್ಷರ ಗಾತ್ರ

ಪಟ್ನಾ: ಅಕ್ಟೋಬರ್‌–ನವೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಅಂದಾಜು ₹900 ಕೋಟಿ ವೆಚ್ಚದ ಮೂರು ಬೃಹತ್‌ ಪೆಟ್ರೋಲಿಯಂ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು.

ದೆಹಲಿಯಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಯೋಜನೆಗಳಿಗೆ ಚಾಲನೆ ನೀಡಿದ ಅವರು, ಬಿಹಾರ ‘ಪ್ರತಿಭೆಗಳ ತವರು’ ಎಂದು ಬಣ್ಣಿಸಿದರು. ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರನ್ನು ಹೊಸ ಬಿಹಾರದ ಹರಿಕಾರ ಎಂದು ಶ್ಲಾಘಿಸಿದರು. ಆ ಮೂಲಕ ಬಿಹಾರದಲ್ಲಿ ಚುನಾವಣಾ ಪ್ರಚಾರ ಭಾಷಣಕ್ಕೆ ಅನಧಿಕೃತವಾಗಿ ಚಾಲನೆ ನೀಡಿದರು.

ಅಪಾರ ನೈಸರ್ಗಿಕ ಸಂಪನ್ಮೂಲ ಮತ್ತು ಪ್ರತಿಭೆಗಳ ಹೊರತಾಗಿಯೂ ಬಿಹಾರ ಹಲವು ವರ್ಷಗಳಿಂದ ಹಿಂದುಳಿ
ದಿತ್ತು. ರಾಜಕೀಯ ಬದ್ಧತೆಯ ಕೊರತೆ ಇದಕ್ಕೆ ಕಾರಣ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಬಿಹಾರದಲ್ಲಿ ಬದಲಾವಣೆ ಗಾಳಿ: ನಿತೀಶ್‌ ಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯ
ದಲ್ಲಿ ಬದಲಾವಣೆಯ ಹೊಸ ಗಾಳಿ ಬೀಸುತ್ತಿದೆ. ಐಐಟಿ, ಐಐಎಂ, ಕೃಷಿ ವಿಶ್ವವಿದ್ಯಾಲಯ, ಕೇಂದ್ರೀಯ ವಿದ್ಯಾ
ಲಯದಂತಹ ಉನ್ನತ ಶಿಕ್ಷಣ ಸಂಸ್ಥೆಗಳು ರಾಜ್ಯದಲ್ಲಿ ತಲೆ ಎತ್ತಿವೆ ಎಂದರು.

ಪಶ್ಚಿಮ ಬಂಗಾಳದ ದುರ್ಗಾಪುರದಿಂದ ಬಿಹಾರದ ಬಂಕಾವರೆಗೆ 200 ಕಿ.ಮೀ ಉದ್ದದ ಅನಿಲ ಕೊಳವೆಮಾರ್ಗ ವಿಸ್ತರಿಸುವ ಕಾಮಗಾರಿಗೆ ಎರಡು ವರ್ಷಗಳ ಹಿಂದೆ ತಾವೇ ಚಾಲನೆ ನೀಡಿದ್ದನ್ನು ಅವರು ಸ್ಮರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT