ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರ ಚುನಾವಣೆ: ಅಯೋಧ್ಯೆ ವಿಷಯ ಪ್ರಸ್ತಾಪಿಸಿದ ಮೋದಿ

ವಿರೋಧ ಪಕ್ಷಗಳಿಂದ ಜಂಗಲ್‌ ರಾಜ್‌ ನಿರ್ಮಾಣ: ಪ್ರಧಾನಿ ಕಿಡಿ
Last Updated 28 ಅಕ್ಟೋಬರ್ 2020, 9:14 IST
ಅಕ್ಷರ ಗಾತ್ರ

ದರಭಂಗಾ: ಬಿಹಾರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಪ್ರಚಾರ ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಯೋಧ್ಯೆ ಮತ್ತು ‘ಜಂಗಲ್‌ ರಾಜ್‌’ ವಿಷಯಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.

ಬುಧವಾರ ಇಲ್ಲಿ ನಡೆದ ಚುನಾವಣಾ ಪ್ರಚಾರ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ರಾಮ ಮಂದಿರವನ್ನು ಏಕೆ ನಿರ್ಮಿಸುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದವರು ಈಗ ಒತ್ತಾಯಪೂರ್ವಕವಾಗಿ ಹೊಗಳುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.

‘ಇಲ್ಲಿ ಭೇಟಿ ನೀಡಿರುವುದು ನನಗೆ ಸಂತಸ ತಂದಿದೆ. ಇದು ತಾಯಿ ಸೀತಾ ದೇವಿಯ ಜನ್ಮಸ್ಥಳ. ಅಯೋಧ್ಯೆಯಲ್ಲೂ ರಾಮಮಂದಿರ ನಿರ್ಮಾಣ ಆರಂಭವಾಗಿದೆ. ಹೀಗಾಗಿ, ವಿರೋಧ ಪಕ್ಷಗಳಿಗೆ ಈ ವಿಷಯದ ಬಗ್ಗೆ ಮಾತನಾಡಲು ಈಗ ವಿಷಯವೇ ಇಲ್ಲ’ ಎಂದು ಹೇಳಿದರು.

ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ‘ಬಿಹಾರ ಆರ್ಥಿಕ ಅಭಿವೃದ್ದಿಗೆ ನಿತೀಶ್‌ ಕುಮಾರ್‌ ಅಪಾರ ಶ್ರಮಿಸಿದ್ದಾರೆ. ಮತ್ತೊಮ್ಮೆ ಅವರೇ ಮುಖ್ಯಮಂತ್ರಿಯಾಗುವುದು ಖಚಿತ’ ಎಂದು ಆಶಾಭಾವ ವ್ಯಕ್ತಪಡಿಸಿದರು.

ಆರ್‌ಜೆಡಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಅಭಿವೃದ್ಧಿ ಯೋಜನೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ದುರುಪಯೋಗಪಡಿಸಿಕೊಂಡಿರುವ ವಿರೋಧ ಪಕ್ಷಗಳು ‘ಜಂಗಲ್‌ ರಾಜ್‌’ ಸೃಷ್ಟಿ ಮಾಡಿದ್ದವು’ ಎಂದು ದೂರಿದರು.

’ಮಿತಿ ಮೀರಿದ ಅಪರಾಧ ಚಟುವಟಿಕೆಗಳಿಂದ ಜನಸಾಮಾನ್ಯರು ಬದುಕು ನಡೆಸುವುದು ದುಸ್ತರವಾಗಿತ್ತು. ಕೃಷಿ ಸಾಲ ಮನ್ನಾ ಮಾಡುವ ಹೆಸರಿನಲ್ಲಿ ವಿರೋಧ ಪಕ್ಷಗಳು ಹಣಕಾಸು ಅಕ್ರಮಗಳನ್ನು ನಡೆಸಿವೆ. ಉದ್ಯೋಗ ನೀಡಲು ಲಂಚ ಪಡೆದಿವೆ. ಪ್ರಗತಿಗಾಗಿ ಮೀಸಲಿಟ್ಟ ಹಣವನ್ನು ಕಬಳಿಸಲು ಹೊಂಚು ಹಾಕಿರುವ ವಿರೋಧ ಪಕ್ಷಗಳ ಬಗ್ಗೆ ಮತದಾರರು ಎಚ್ಚರವಹಿಸಬೇಕು’ ಎಂದು ಆರ್‌ಜೆಡಿ, ಕಾಂಗ್ರೆಸ್‌ ಹೆಸರು ಪ್ರಸ್ತಾಪಿಸದೆ ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT