ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಮಹಿಳಾ ದಿನ: ಪ್ರಧಾನಿ ಮೋದಿ, ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ

Last Updated 8 ಮಾರ್ಚ್ 2022, 7:54 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಗುರುತಿಸಲು ಪ್ರತಿ ವರ್ಷ ಮಾರ್ಚ್ 8ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ.

ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭ ಕೋರಿದ್ದಾರೆ.

'ಮಹಿಳಾ ದಿನದ ಈ ಸಂದರ್ಭದಲ್ಲಿ, ನಮ್ಮ ನಾರಿ ಶಕ್ತಿ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅವರ ಸಾಧನೆಗಳಿಗೆ ವಂದಿಸುತ್ತೇನೆ. ಭಾರತ ಸರ್ಕಾರವು ತನ್ನ ವಿವಿಧ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣದತ್ತ ಗಮನ ಹರಿಸಲಿದೆ' ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

'ಆರ್ಥಿಕ ಒಳಗೊಳ್ಳುವಿಕೆಯಿಂದ ಸಾಮಾಜಿಕ ಭದ್ರತೆ, ಗುಣಮಟ್ಟದ ಆರೋಗ್ಯ ಸೇವೆಯಿಂದ ವಸತಿ, ಶಿಕ್ಷಣದಿಂದ ಉದ್ಯಮಶೀಲತೆ ಸೇರಿದಂತೆ ಭಾರತದ ಅಭಿವೃದ್ಧಿ ಪಯಣದಲ್ಲಿ ನಮ್ಮ ನಾರಿ ಶಕ್ತಿಯನ್ನು ಮುಂಚೂಣಿಯಲ್ಲಿಡಲು ಹಲವು ಪ್ರಯತ್ನಗಳನ್ನು ಮಾಡಲಾಗಿದೆ. ಈ ಪ್ರಯತ್ನಗಳು ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಹುರುಪಿನೊಂದಿಗೆ ಮುಂದುವರಿಯುತ್ತವೆ' ಎಂದು ಮೋದಿ ಹೇಳಿದ್ದಾರೆ.

‘ಮಹಿಳೆಯರು ತಮ್ಮ ಬುದ್ಧಿವಂತಿಕೆ, ಸಮರ್ಪಣಾ ಮನೋಭಾವದಿಂದ ಸಮಾಜವನ್ನು ಪರಿವರ್ತಿಸಲು ಸಮರ್ಥರಾಗಿದ್ದಾರೆ. ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಶಯಗಳು’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

‘ಅಮ್ಮನಾಗಿ ಉಸಿರು ನೀಡುತ್ತಾಳೆ. ಸಹೋದರಿಯಾಗಿ ಪ್ರೀತಿ ಕೊಡುತ್ತಾಳೆ. ಅಜ್ಜಿಯಾಗಿ ಮುದ್ದಿಸುತ್ತಾಳೆ. ಗೆಳತಿಯಾಗಿ ಧೈರ್ಯ ತುಂಬುತ್ತಾಳೆ. ಮಡದಿಯಾಗಿ ಬದುಕು ನೀಡುತ್ತಾಳೆ. ಗುರುವಾಗಿ ದಾರಿ ತೋರುತ್ತಾಳೆ. ಧಣಿಯಾಗಿ ಬದುಕಿಗೆ ಭದ್ರತೆ ನೀಡುತ್ತಾಳೆ. ಒಂದೇ.. ಎರಡೇ.. ವರ್ಣಿಸಲು ಪದಗಳೇ ಸಾಲದು. ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು’ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

‘ಮಹಿಳಾ ಸಬಲೀಕರಣದಿಂದಲೇ ಸಮಾಜದ ಸಬಲೀಕರಣ. ಲಿಂಗ ಸಮಾನತೆಯಿಂದಲೇ ಸಮಸಮಾಜದ ನಿರ್ಮಾಣ. -ಈ ನಂಬಿಕೆಗೆ ನಾನು ಸದಾ ಬದ್ಧ. ನಾಡಿನ ನನ್ನೆಲ್ಲ ಸೋದರಿಯರಿಗೆ ಅಂತರರಾಷ್ಟ್ರೀಯ ಮಹಿಳಾ ದಿನದ ಶುಭ ಹಾರೈಕೆಗಳು’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

‘ಅಮ್ಮನ ಪಾಲನೆ, ಪೋಷಣೆಯು ವ್ಯಕ್ತಿತ್ವದ ಶಕ್ತಿಯ ಬಗ್ಗೆ ಮಹತ್ವದ ಅರಿವು ಮೂಡಿಸಿತು ಹಾಗೂ ನನ್ನಲ್ಲಿ ಸರಳತೆ ಮತ್ತು ನಮ್ರತೆಯ ಮೌಲ್ಯಗಳನ್ನು ಬೆಳೆಸಿತು. ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ತಮ್ಮ ಕುಟುಂಬದವರಿಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಮತ್ತು ನಾಳಿನ ನಾಯಕರನ್ನು ಬೆಳೆಸುತ್ತಿರುವ ಮಹಿಳೆಯರನ್ನು ನಾವು ಸ್ಮರಿಸೋಣ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಆಕಾಶದ ನೀಲಿಯಲ್ಲಿ
ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ

ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೇ ಸಾಕೆ?

ರಾಷ್ಟ್ರಕವಿ ಜಿ.ಎಸ್.‌ಶಿವರುದ್ರಪ್ಪನವರು ಬರೆದ ಈ ಸಾಲುಗಳು ಎಂದೆಂದಿಗೂ ಪ್ರಸ್ತುತ. ಸಮಾನ ಅವಕಾಶಗಳಿಂದಲೇ ಸ್ತ್ರೀಯರ ಉನ್ನತಿ ಸಾಧ್ಯ. ನಾಡಿನ ಸಮಸ್ತ ನಾರಿಯರಿಗೆ ಮಹಿಳಾ ದಿನದ ಶುಭಾಶಯಗಳು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಮಹಿಳೆಯರು ಅದ್ಭುತ ಸಾಧನೆ ಮಾಡಿದ್ದಾರೆ. ತನ್ನದೇ ಆದ ರೀತಿಯಲ್ಲಿ ಅನೇಕರಿಗೆ ಸ್ಫೂರ್ತಿಯಾಗಿರುವ ಪ್ರತಿಯೊಬ್ಬ ಮಹಿಳೆಗೆ ಇಲ್ಲಿ ಗೌರವವಿದೆ!’ ಎಂದು ಭಾರತದ ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT