ಶುಕ್ರವಾರ, ಫೆಬ್ರವರಿ 3, 2023
15 °C

ಮೂತ್ರಪಿಂಡ ಕಸಿ: ಲಾಲು ಪ್ರಸಾದ್ ಆರೋಗ್ಯ ವಿಚಾರಿಸಿದ ಪ್ರಧಾನಿ ನರೇಂದ್ರ ಮೋದಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. 

ಮೋದಿ ಅವರು ಮಂಗಳವಾರ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ಲಾಲು ಪ್ರಸಾದ್ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. 

ಲಾಲು ಪ್ರಸಾದ್ ಇತ್ತೀಚೆಗೆ ಸಿಂಗಪುರದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಒಳಗಾಗಿದ್ದರು. 

‘ನಮ್ಮ ತಂದೆ ಲಾಲು ಪ್ರಸಾದ್ ಅವರಿಗೆ ಸಿಂಗಪುರ ಆಸ್ಪತ್ರೆಯಲ್ಲಿ ನಡೆದ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ’ ಎಂದು ಅವರ ಮಗ, ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸೋಮವಾರ ಹೇಳಿದ್ದರು. 

ತಂದೆ ಮತ್ತು ಅವರಿಗೆ ಮೂತ್ರಪಿಂಡ ದಾನ ಮಾಡಿದ ಅಕ್ಕ ರೋಹಿಣಿ ಆಚಾರ್ಯ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತೇಜಸ್ವಿ ತಿಳಿಸಿದ್ದರು.

ಮೇವು ಹಗರಣದ ಹಲವು ಪ್ರಕರಣಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ನ್ಯಾಯಾಲಯವು ಜಾಮೀನು ನೀಡಿತ್ತು.

ಇವನ್ನೂ ಓದಿ... 

ಅಂಬೇಡ್ಕರ್ ಶವಸಂಸ್ಕಾರಕ್ಕೆ ಕಾಂಗ್ರೆಸ್‌ ಬೇಕಂತಲೇ ಜಾಗ ಕೊಡಲಿಲ್ಲ: ಬಿಜೆಪಿ ಟೀಕೆ 

ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು